ಅಲಹಾಬಾದ್: ಕೃಷ್ಣಜನ್ಮ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಹಿ ಈದ್ಗಾ ಮಸೀದಿ ಸರ್ವೆ ನಡಸಲು ನೇಮಕರನ್ನು ಆಯೋಜಿಸುವ ಬಗ್ಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಡಿಸೆಂಬರ್ 14 ರಂದು ಶಾಹೀ ಈದ್ಗಾ ಮಸೀದಿ ಜಾಗದ ಸರ್ವೆ ನಡೆಸಲು ಆಯುಕ್ತರನ್ನು ನೇಮಿಸುವಂತೆ ಅಲಹಾಬಾದ್ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಮಸೀದಿ ಸಮಿತಿ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ದೀಪಾಂಕರ್ ದತ್ತಾ ಮತ್ತು ಸಂಜೀವ್ ಖ್ನ್ನಾ ಅವರ ಪೀಠವು ತಡೆ ನೀಡಿ ಆದೇಶ ಹೊರಡಿಸಿದೆ.
ಸ್ಥಳೀಯ ಆಯುಕ್ತರ ನೇಮಕಕ್ಕೆ ಹೈಕೋರ್ಟ್‌ಗೆ ಸಲ್ಲಿಸಲಾದ ಅರ್ಜಿಯು ತುಂಬಾ ಅಸ್ಪಷ್ಟವಾಗಿದೆ. ಪ್ರಕರಣದಲ್ಲಿ ಪರಿಗಣಿಸಲು ಕೆಲವು ಕಾನೂನು ಪ್ರಶ್ನೆಗಳು ಸಹ ಉದ್ಭವಿಸುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈ ಅರ್ಜಿಯನ್ನು ತಿರಸ್ಕರಿಸಬೇಕೆಂದು ಕೋರಿ ತಾನು ಸಲ್ಲಿಸಿದ್ದ ಅರ್ಜಿಯ ಕುರಿತು ತೀರ್ಪು ನೀಡುವ ಮುನ್ನವೇ ಅಡ್ವಕೇಟ್ ಕಮಿಷನರ್ ನೇಮಕಾತಿ ಆದೇಶ ಹೊರಡಿಸಬಾರದಾಗಿತ್ತು ಎಂದು ಮಸೀದಿ ಸಮಿತಿ ವಾದಿಸಿತ್ತು.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…