ರಾಷ್ಟ್ರೀಯ

ಶಾಹಿ ಈದ್ಗಾ ಮಸೀದಿ ಪ್ರಕರಣ: ಅಲಹಾಬಾದ್‌ ಆದೇಶ ತಡೆಹಿಡಿದ ಸುಪ್ರೀಂ

ಅಲಹಾಬಾದ್‌: ಕೃಷ್ಣಜನ್ಮ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಹಿ ಈದ್ಗಾ ಮಸೀದಿ ಸರ್ವೆ ನಡಸಲು ನೇಮಕರನ್ನು ಆಯೋಜಿಸುವ ಬಗ್ಗೆ ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ.

ಡಿಸೆಂಬರ್‌ 14 ರಂದು ಶಾಹೀ ಈದ್ಗಾ ಮಸೀದಿ ಜಾಗದ ಸರ್ವೆ ನಡೆಸಲು ಆಯುಕ್ತರನ್ನು ನೇಮಿಸುವಂತೆ ಅಲಹಾಬಾದ್‌ ಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಮಸೀದಿ ಸಮಿತಿ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ದೀಪಾಂಕರ್‌ ದತ್ತಾ ಮತ್ತು ಸಂಜೀವ್‌ ಖ್ನ್ನಾ ಅವರ ಪೀಠವು ತಡೆ ನೀಡಿ ಆದೇಶ ಹೊರಡಿಸಿದೆ.

ಸ್ಥಳೀಯ ಆಯುಕ್ತರ ನೇಮಕಕ್ಕೆ ಹೈಕೋರ್ಟ್‌ಗೆ ಸಲ್ಲಿಸಲಾದ ಅರ್ಜಿಯು ತುಂಬಾ ಅಸ್ಪಷ್ಟವಾಗಿದೆ. ಪ್ರಕರಣದಲ್ಲಿ ಪರಿಗಣಿಸಲು ಕೆಲವು ಕಾನೂನು ಪ್ರಶ್ನೆಗಳು ಸಹ ಉದ್ಭವಿಸುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಅರ್ಜಿಯನ್ನು ತಿರಸ್ಕರಿಸಬೇಕೆಂದು ಕೋರಿ ತಾನು ಸಲ್ಲಿಸಿದ್ದ ಅರ್ಜಿಯ ಕುರಿತು ತೀರ್ಪು ನೀಡುವ ಮುನ್ನವೇ ಅಡ್ವಕೇಟ್ ಕಮಿಷನ‌ರ್ ನೇಮಕಾತಿ ಆದೇಶ ಹೊರಡಿಸಬಾರದಾಗಿತ್ತು ಎಂದು ಮಸೀದಿ ಸಮಿತಿ ವಾದಿಸಿತ್ತು.

andolanait

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

43 mins ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

2 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

8 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

8 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

8 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

8 hours ago