ಡೆಹ್ರಾಡೂನ್ : ಉತ್ತರಕಾಶಿ ಸಮೀಪ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯವು ಸಂಪೂರ್ಣ ಯಶಸ್ವಿಯಾಗಿದ್ದು, ಎಲ್ಲಾ 41 ಕಾರ್ಮಿಕರು ಸುರಂಗದಿಂದ ಹೊರಬಂದಿದ್ದಾರೆ. ಇವರೆಲ್ಲರನ್ನು ಕೂಡಲೇ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇತ್ತ ಕಾರ್ಮಿಕರು ಹೊರ ಬರುತ್ತಿದ್ದಂತೆ ಕುಟುಂಬಸ್ಥರು ತಮ್ಮವರ ಮುಖಗಳನ್ನು ಕಂಡು ಸಂತಸಪಟ್ಟರು. ತಂದಿದ್ದ ಸಿಹಿಯನ್ನು ಸೇನಾ ಸಿಬ್ಬಂದಿಗೆ ತಿನ್ನಿಸಿ ನಮ್ಮವರನ್ನು ಕಾಪಾಡಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದರು.
ಉತ್ತರಕಾಶಿಯಲ್ಲಿ ನಮ್ಮ ಕಾರ್ಮಿಕ ಬಂಧುಗಳ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ. ಸುರಂಗದಲ್ಲಿ ಸಿಕ್ಕಿ ಬಿದ್ದಿದ್ದ ಸ್ನೇಹಿತರ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ.
ದೀರ್ಘಾವಧಿ ಸಮಯದ ತಮ್ಮ ತಮ್ಮ ಕುಟುಂಬದ ಪ್ರೀತಿಪಾತ್ರರನ್ನು ಭೇಟಿಯಾಗುತ್ತಾರೆ ಎಂಬುದು ಸಂತಸದ ವಿಷಯ. ಈ ಸವಾಲಿನ ಸಮಯದಲ್ಲಿ ಈ ಎಲ್ಲಾ ಕುಟುಂಬಗಳು ತೋರಿದ ತಾಳ್ಮೆ ಮತ್ತು ಧೈರ್ಯವನ್ನು ಮೆಚ್ಚುತ್ತೇವೆ.
ಈ ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲ ಜನರಿಗೆ ನಾನು ನಮಸ್ಕರಿಸುತ್ತೇನೆ. ಅವರ ಶೌರ್ಯ ಮತ್ತು ಸ್ಥೈರ್ಯ ನಮ್ಮ ಕಾರ್ಮಿಕ ಬಂಧುಗಳಿಗೆ ಹೊಸ ಬದುಕನ್ನು ನೀಡಿದೆ. ಈ ಕಾರ್ಯಾಚರಣೆಯಲ್ಲಿ ತೊಡಗಿರುವ ಪ್ರತಿಯೊಬ್ಬರ ಮಾನವೀಯತೆ ಮತ್ತು ಕೆಲಸ ಶ್ಲಾಘನೀಯ ಎಂದು ಪ್ರಧಾನಿ ಹೇಳಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ : “ಉತ್ತರಾಖಂಡದ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ತಿಳಿದು ನನಗೆ ಸಮಾಧಾನ, ಸಂತೋಷವಾಗಿದೆ. ರಕ್ಷಣಾ ಪ್ರಯತ್ನವು ಅಡೆತಡೆಗಳನ್ನು ಎದುರಿಸಿ 17 ದಿನಗಳ ಕಾಲ ಶ್ರಮಕ್ಕೆ ಈ ಕಾರ್ಯಚರಣೆ ಸಾಕ್ಷಿಯಾಗಿದೆ ” ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರ: ಸುಮಾರು 60ಕ್ಕೂ ಹೆಚ್ಚು ಕುರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಕಾಚಹಳ್ಳಿಯಲ್ಲಿ ನಡೆದಿದೆ. ಸಾವಿಗೆ ನಿಖರ ಕಾರಣ…
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಾಶ್ರಿತರ ಮಾಹಿತಿ ಜಿಬಿಎ ಕೈಸೇರಿದ್ದು ಒಟ್ಟು 188 ಮನೆಗಳನ್ನು…
ಬಳ್ಳಾರಿ: ಬಳ್ಳಾರಿಯಲ್ಲಿ ಗಲಾಟೆ, ಫೈರಿಂಗ್ ಪ್ರಕರಣ ಸಂಬಂಧ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾರನ್ನೂ ಬಂಧಿಸಿಲ್ಲ ಎಂದು ಬಳ್ಳಾರಿ ವಲಯ ಡಿಐಜಿ ವರ್ತಿಕಾ…
ಧಾರವಾಡ: ಹೊಸ ವರ್ಷದಲ್ಲಿ ಕೇಂದ್ರ ಸರ್ಕಾರ ಉತ್ತರ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಮೈಕೊರೆವ ಚಳಿ ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…