Mysore
24
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಅಮಿತ್‌ ಶಾ ಭೇಟಿ ಮಾಡಿ ಬರ ಪರಿಹಾರದ ಬೇಡಿಕೆ ಇಟ್ಟ ಸಿದ್ದರಾಮಯ್ಯ

ನವದೆಹಲಿ ಪ್ರವಾಸ ಕೈಗೊಂಡಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಡಿಸೆಂಬರ್‌ 20 ) ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ರಾಜ್ಯದ ಬರದ ಕುರಿತು ಚರ್ಚೆ ನಡೆಸಿದ್ದಾರೆ. ಕೂಡಲೇ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆ ಕರೆದು ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ಈ ವರ್ಷ ಸರಿಯಾಗಿ ಮಳೆಯಾಗದ ಕಾರಣ ರಾಜ್ಯದ 236 ತಾಲೂಕುಗಳ ಪೈಕಿ 233 ತಾಲೂಕುಗಳು ಬರಪೀಡಿತವಾಗಿವೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶಗಳ ಬೆಲೆ ನಾಶವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ಎನ್‌ಡಿಆರ್‌ಎಫ್‌ ಮಾರ್ಗಸೂಚಿಯ ಅನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲು ಪ್ರಸ್ತಾವನೆಯನ್ನು ಸಲ್ಲಿಸಿ ಮೂರು ತಿಂಗಳುಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ 18177.44 ಕೋಟಿ ಬರ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಈ ಮೊತ್ತದ ಪೈಕಿ 4663.12 ಕೋಟಿ ಇನ್‌ಪುಟ್‌ ಸಬ್ಸಿಡಿ, 12577.86 ಕೋಟಿ ತುರ್ತು ಪರಿಹಾರ, 566.78 ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ಜಾನುವಾರಗಳ ಸಂರಕ್ಷಣೆಗಾಗಿ ಎಂದು ತಿಳಿದುಬಂದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!