ನವದೆಹಲಿ ಪ್ರವಾಸ ಕೈಗೊಂಡಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಡಿಸೆಂಬರ್ 20 ) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದ ಬರದ ಕುರಿತು ಚರ್ಚೆ ನಡೆಸಿದ್ದಾರೆ. ಕೂಡಲೇ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆ ಕರೆದು ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ಈ ವರ್ಷ ಸರಿಯಾಗಿ ಮಳೆಯಾಗದ ಕಾರಣ ರಾಜ್ಯದ 236 ತಾಲೂಕುಗಳ ಪೈಕಿ 233 ತಾಲೂಕುಗಳು ಬರಪೀಡಿತವಾಗಿವೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶಗಳ ಬೆಲೆ ನಾಶವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ಎನ್‌ಡಿಆರ್‌ಎಫ್ ಮಾರ್ಗಸೂಚಿಯ ಅನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲು ಪ್ರಸ್ತಾವನೆಯನ್ನು ಸಲ್ಲಿಸಿ ಮೂರು ತಿಂಗಳುಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ 18177.44 ಕೋಟಿ ಬರ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.
ಈ ಮೊತ್ತದ ಪೈಕಿ 4663.12 ಕೋಟಿ ಇನ್‌ಪುಟ್ ಸಬ್ಸಿಡಿ, 12577.86 ಕೋಟಿ ತುರ್ತು ಪರಿಹಾರ, 566.78 ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ಜಾನುವಾರಗಳ ಸಂರಕ್ಷಣೆಗಾಗಿ ಎಂದು ತಿಳಿದುಬಂದಿದೆ.
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…