ರಾಷ್ಟ್ರೀಯ

ಸಂಸತ್ ಮೇಲಿನ ಹೊಗೆ ಬಾಂಬ್ ದಾಳಿ :6 ರಾಜ್ಯಗಳಲ್ಲಿ ಫೀಲ್ಡ್‌ಗಿಳಿದ ವಿಶೇಷ ತಂಡ

ನವದೆಹಲಿ : ಸಂಸತ್ ಮೇಲಿನ ಹೊಗೆ ಬಾಂಬ್ ದಾಳಿ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಇದೀಗ ಭದ್ರತಾ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು 6 ರಾಜ್ಯಗಳಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ತಂಡಗಳು ಫೀಲ್ಡ್ ಗೆ ಇಳಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಡಿಸೆಂಬರ್ 13 ರಂದು ನಡೆದ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆಯ ತನಿಖೆಗಾಗಿ ದೆಹಲಿ ಪೊಲೀಸ್ ವಿಶೇಷ ಘಟಕದ ತಂಡಗಳು ರಾಜಸ್ಥಾನ, ಹರಿಯಾಣ, ಕರ್ನಾಟಕ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ತನಿಖೆ ನಡೆಸಲಿದೆ.

ಸಂಸತ್ ಭವನದಲ್ಲಿ ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆಯಲ್ಲೇ ಭದ್ರತಾ ಲೋಪ ಎದುರಾಗಿತ್ತು, ಇಬ್ಬರು ಅಪರಿಚಿತರು ಲೋಕಸಭೆಯಿಂದ ಗ್ಯಾಲರಿಯಿಂದ ಸಂಸದರು ಕುಳಿತುಕೊಳ್ಳುವ ಸ್ಥಳಕ್ಕೆ ನೆಗೆದು ಕುರ್ಚಿಯಿಂದ ಕುರ್ಚಿಗೆ ಎಗರುತ್ತಾ ಬಣ್ಣಗಳ ಹೊಗೆ ಬರುವ ವಸ್ತುಗಳನ್ನ ಸಿಡಿಸಿದ್ದರು.

ಇದರಿಂದ ಬೆದರಿದ ಸಂಸದರು ಸಂಸತ್ ಭವನದಿಂದ ಹೊರಗೆ ಓಡಿ ಹೋಗಿದ್ದರು. ಅಲ್ಲದೇ ಸಂಸತ್ ಭವನದ ಹೊರಗಡೆ ಇಬ್ಬರು ಹೊಗೆ ಸೂಸುವ ಡಬ್ಬಿಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದರು. ಪ್ರಕರಣ ಸಂಬಂಧ ಇದುವರೆಗೆ 6 ಮಂದಿಯನ್ನು ಬಂಧಿಸಲಾಗಿದೆ.

ಸಂಸತ್ ದಾಳಿ ಗಂಭೀರ ವಿಷಯವಾಗಿದ್ದು, ಇದರ ಹಿಂದಿನ ಉದ್ದೇಶ ಗೊತ್ತಾಗಬೇಕು , ದಾಳಿ ಹಿಂದಿನ ವ್ಯಕ್ತಿಗಳು/ಸಂಘಟನೆಗಳು ಹಾಗೂ ಅವರ ಉದ್ದೇಶ ಏನು ಎಂಬುದು ಸಂಪೂರ್ಣವಾಗಿ ಬಹಿರಂಗವಾಗಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

andolanait

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

1 hour ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

1 hour ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

1 hour ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

1 hour ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

2 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

2 hours ago