ನವದೆಹಲಿ : ಸಂಸತ್ ಮೇಲಿನ ಹೊಗೆ ಬಾಂಬ್ ದಾಳಿ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಇದೀಗ ಭದ್ರತಾ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು 6 ರಾಜ್ಯಗಳಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ತಂಡಗಳು ಫೀಲ್ಡ್ ಗೆ ಇಳಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಡಿಸೆಂಬರ್ 13 ರಂದು ನಡೆದ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆಯ ತನಿಖೆಗಾಗಿ ದೆಹಲಿ ಪೊಲೀಸ್ ವಿಶೇಷ ಘಟಕದ ತಂಡಗಳು ರಾಜಸ್ಥಾನ, ಹರಿಯಾಣ, ಕರ್ನಾಟಕ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ತನಿಖೆ ನಡೆಸಲಿದೆ.
ಸಂಸತ್ ಭವನದಲ್ಲಿ ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆಯಲ್ಲೇ ಭದ್ರತಾ ಲೋಪ ಎದುರಾಗಿತ್ತು, ಇಬ್ಬರು ಅಪರಿಚಿತರು ಲೋಕಸಭೆಯಿಂದ ಗ್ಯಾಲರಿಯಿಂದ ಸಂಸದರು ಕುಳಿತುಕೊಳ್ಳುವ ಸ್ಥಳಕ್ಕೆ ನೆಗೆದು ಕುರ್ಚಿಯಿಂದ ಕುರ್ಚಿಗೆ ಎಗರುತ್ತಾ ಬಣ್ಣಗಳ ಹೊಗೆ ಬರುವ ವಸ್ತುಗಳನ್ನ ಸಿಡಿಸಿದ್ದರು.
ಇದರಿಂದ ಬೆದರಿದ ಸಂಸದರು ಸಂಸತ್ ಭವನದಿಂದ ಹೊರಗೆ ಓಡಿ ಹೋಗಿದ್ದರು. ಅಲ್ಲದೇ ಸಂಸತ್ ಭವನದ ಹೊರಗಡೆ ಇಬ್ಬರು ಹೊಗೆ ಸೂಸುವ ಡಬ್ಬಿಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದರು. ಪ್ರಕರಣ ಸಂಬಂಧ ಇದುವರೆಗೆ 6 ಮಂದಿಯನ್ನು ಬಂಧಿಸಲಾಗಿದೆ.
ಸಂಸತ್ ದಾಳಿ ಗಂಭೀರ ವಿಷಯವಾಗಿದ್ದು, ಇದರ ಹಿಂದಿನ ಉದ್ದೇಶ ಗೊತ್ತಾಗಬೇಕು , ದಾಳಿ ಹಿಂದಿನ ವ್ಯಕ್ತಿಗಳು/ಸಂಘಟನೆಗಳು ಹಾಗೂ ಅವರ ಉದ್ದೇಶ ಏನು ಎಂಬುದು ಸಂಪೂರ್ಣವಾಗಿ ಬಹಿರಂಗವಾಗಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…