ರಾಷ್ಟ್ರೀಯ

ಮಹಿಳೇಯರ ಒಳ ಉಡುಪಿನೊಂದಿಗೆ ಸೈನಿಕರ ಆಟ : ಎಲ್ಲೆಡೆ ಬಾರಿ ಆಕೋಶ !

ಇಸ್ರೇಲ್:  ಇಸ್ರೇಲ್ ಸೈನಿಕರು ಮಹಿಳೆಯರ ಒಳ ಉಡುಪು ಹಿಡಿದು ಗೇಲಿ ಮಾಡುತ್ತಿದ್ದ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್ ಆಗಿವೆ.

ಈ ಫೋಟೋಗಳಲ್ಲಿ, ಇಸ್ರೇಲ್‌ ಸೈನಿಕರು ಯುದ್ಧದಲ್ಲಿ ಗೆದ್ದ ಗಾಜಾದ ಪ್ರದೇಶಗಳಲ್ಲಿ ಕಾಣಿಸಿಕೊಂಡಿದ್ದು, ಇಲ್ಲಿ ಸೈನಿಕರು ಮಹಿಳೆಯರ ಬಟ್ಟೆಯೊಂದಿಗೆ ಅಸಭ್ಯವಾಗಿ ಆಟವಾಡುತ್ತಿರುವುದು ಕಂಡು ಬಂದಿದೆ.

ಅಷ್ಟೇ ಅಲ್ಲ, ಅಲ್ಲಿನ ಮಹಿಳೆಯರ ಒಳ ಉಡುಪುಗಳ ಬಗ್ಗೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿರುವ ವಿಡಿಯೋಗಳು ಬಾರಿ ವಿರೋಧಕ್ಕೆ ಕಾರಣವಾಗಿದೆ.

ಇಸ್ರೇಲ್ ಸೈನಿಕರು ಈ ರೀತಿ ನಡೆದುಕೊಳ್ಳುತ್ತಿರುವುದು ಅಲ್ಲಿನ ಮಹಿಳೆಯರಿಗೆ ಅವಮಾನಕರ ಎಂದು ಗಾಜಾದ ಜನತೆ ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೇ ಈ ರೀತಿಯ ವರ್ತನೆ ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯೂ ಆಗಿದೆ. ಇಸ್ರೇಲಿ ಸೈನಿಕರ ಈ ವಿಡಿಯೋಗಳು ಜಾಗತಿಕ ಮಟ್ಟದಲ್ಲಿ ಪ್ರಭಾವ ಬೀರುತ್ತಿದ್ದು, ಸೈನಿಕರ ವಿರುದ್ಧ ಜಗತ್ತಿನಾದ್ಯಂತ ಬಾರಿ ಆಕ್ರೋಶ ವ್ಯಕ್ತವಾಗಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

13 mins ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

1 hour ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

1 hour ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

2 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

2 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

3 hours ago