ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ನೋಟಿಸ್ ಜಾರಿಮಾಡಿದೆ.
ಡಿ.ಕೆ ಶಿವಕುಮಾರ್ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಯ ಬೆಂಗಳೂರು ಘಟಕವು ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ 2024 ರ ಜನವರಿ 11ರಂದು ತನಿಖಾಧಿಕಾರಿ ಕೋರಿದ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ತನಿಖೆಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ.
ಸಿಆರ್‌ಪಿಸಿಯ ಸೆಕ್ಷನ್ 91 ರ ಅಡಿಯಲ್ಲಿ ಹೊರಡಿಸಲಾದ ನೋಟಿಸ್‌ನಲ್ಲಿ, ಡಿಕೆ ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್ ಅವರು ಮಾಡಿದ ಹೂಡಿಕೆಗಳು, ಅವರಿಗೆ ಪಾವತಿಸಿದ ಲಾಭಾಂಶಗಳು, ಷೇರು ವಹಿವಾಟುಗಳು, ಹಣಕಾಸಿನ ವಹಿವಾಟುಗಳ ಜೊತೆಗೆ ಅವರ ಬ್ಯಾಂಕ್ ವಿವರಗಳನ್ನು ಒದಗಿಸುವಂತೆ ಸಿಬಿಐ ಚಾನಲ್‌ಗೆ ಕೇಳಿದೆ.
ಹಿಡುವಳಿಗಳ ಹೇಳಿಕೆ, ಅವರ ಲೆಡ್ಜರ್ ಖಾತೆಗಳು, ಒಪ್ಪಂದದ ಟಿಪ್ಪಣಿಗಳು ಮತ್ತು ಇತರ ವಿವರಗಳ ಜೊತೆಗೆ ಎಲ್ಲಾ ಷೇರು ವಹಿವಾಟುಗಳ ವಿವರಗಳನ್ನು ಕೇಳಿದೆ.
ಜೈಹಿಂದ್ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್ ಶಿಜು ಅವರು ಸಿಬಿಐ ನೋಟಿಸ್ ಸ್ವೀಕರಿಸಿದ್ದು, ಸಂಸ್ಥೆ ಕೋರಿರುವ ಎಲ್ಲಾ ದಾಖಲೆಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ, ಎಲ್ಲಾ ದಾಖಲೆಗಳು ತಮ್ಮ ಬಳಿ ಇವೆ ಮತ್ತು ಯಾವುದೇ ಅಕ್ರಮ ನಡೆಸಿಲ್ಲ ಎಂದು ಹೇಳಿದ್ದಾರೆ.
ಪಿಟಿಐ ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ಅವರು, ಈ ಪ್ರಕರಣವನ್ನು ಮತ್ತೆ ಕೆದಕಿರುವುದು ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ಡಿಕೆ ಶಿವಕುಮಾರ್ ಅವರಿಗೆ ಕಿರುಕುಳ ಮಾಡುವ ಪ್ರಯತ್ನವಾಗಿದೆ ಎಂದು ಹೇಳಿದರು.
ಶಿವಕುಮಾರ್ ವಿರುದ್ಧ ಸಿಬಿಐ 2020 ರಲ್ಲಿ ಪ್ರಕರಣ ದಾಖಲಿಸಿದ್ದು, 2013 ಮತ್ತು 2018 ರ ನಡುವೆ ಅವರು 74 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಯನ್ನು ಗಳಿಸಿದ್ದಾರೆ ಎಂದು ಆರೋಪಿಸಿದ್ದರು, ಅದು ಅವರ ಆದಾಯಕ್ಕೆ ಅನುಗುಣವಾಗಿಲ್ಲ ಎಂದು ಆರೋಪಿಸಲಾಗಿದೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…