ಬಾಲಿವುಡ್ ಖ್ಯಾತ ನಟ ಸನ್ನಿ ಡಿಯೋಲ್ ರಸ್ತೆಯಲ್ಲಿ ಕಂಠಪೂರ್ತಿ ಕುಡಿದುಕೊಂಡು ಜೋಲಿ ಹೊಡೆಯುತ್ತಾ ಬರುತ್ತಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು. ಈ ವಿಡಿಯೋವನ್ನು ಫೋಟೋಗೆ ಕನ್ವರ್ಟ್ ಮಾಡಿಯೂ ಟ್ರೋಲ್ ಮಾಡಲಾಗಿತ್ತು.
ಅನೇಕರು ನಾನಾ ರೀತಿಯಲ್ಲಿ ಕಾಮೆಂಟ್ ಕೂಡ ಮಾಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸನ್ನಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬಾಲಿವುಡ್ ಪಾರ್ಟಿಗಳಲ್ಲಿ ತೂರಾಡಿಕೊಂಡು ಕಾರು ಹತ್ತುವುದು ಸಾಮಾನ್ಯ. ಅನೇಕ ನಟ ನಟಿಯರು ಪಾರ್ಟಿಗಳಿಂದ ಆಚೆ ಬರುವಾಗ ಜೋಲಿ ಹೊಡೆಯುವ ದೃಶ್ಯವನ್ನು ಅನೇಕರು ಸೆರೆ ಹಿಡಿದಿದ್ದಾರೆ. ಆದರೆ, ಸನ್ನಿ ಡಿಯೋಲ್ ತೂರಾಡಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಬರುವ ವಿಡಿಯೋ ಅದಾಗಿತ್ತು. ಹಾಗಾಗಿ ವೈರಲ್ ಆಗಿತ್ತು.
ಆ ವಿಡಿಯೋ ಯಾವುದು, ಅದರ ಅಸಲಿತ್ತು ಏನು ಎನ್ನುವುದನ್ನು ಮತ್ತೊಂದು ವಿಡಿಯೋ ಮೂಲಕ ಸನ್ನಿ ಸ್ಪಷ್ಟ ಪಡಿಸಿದ್ದಾರೆ. ರಸ್ತೆಯಲ್ಲಿ ತೂರಾಡುತ್ತ ಬರುವ ಮತ್ತು ಆ ದೃಶ್ಯವನ್ನು ಹಲವು ಕ್ಯಾಮೆರಾಗಳು ಸೆರೆ ಹಿಡಿಯುತ್ತಿರುವ ವಿಡಿಯೋವನ್ನು ಶೇರ್ ಮಾಡಿ, ಗಾಳಿ ಸುದ್ದಿ ಪಯಣ ಇಲ್ಲಿಗೆ ಮುಗೀತು ಎಂದು ಬರೆದುಕೊಂಡಿದ್ದಾರೆ. ಅದು ಸಿನಿಮಾದ ದೃಶ್ಯವೆಂದು ಈ ಮೂಲಕ ಸ್ಪಷ್ಟ ಪಡಿಸಿದ್ದಾರೆ.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…