ನವದೆಹಲಿ: ತಮಿಳುನಾಡಿನಲ್ಲಿ ಪೊಂಗಲ್ ಹಬ್ಬದಂದು ರಾಜಾದ್ಯಂತ ನಡೆಯುವ ‘ಜಲ್ಲಿಕಟ್ಟು’ ಕ್ರೀಡೆಗೆ ಅವಕಾಶ ನೀಡಲು ರಾಜ್ಯದ ಕಾನೂನಿನಲ್ಲಿ ಮಾಡಿರುವ ತಿದ್ದುಪಡಿಗಳ ಸಿಂಧುತ್ವವನ್ನು ಎತ್ತಿ ಹಿಡಿದಿದ್ದ ತನ್ನ 2023ರ ತೀರ್ಪಿನ ಪುನರ್ಪರಿಶೀಲನೆಯನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ವಿಚಾರಣೆಗೆ ಪಟ್ಟಿ ಮಾಡುವುದನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಕೊಂಡಿದೆ.
ಈ ಸಂಬಂಧ ಹಿರಿಯ ನ್ಯಾಯವಾದಿ ಅಭಿಷೇಕ್ ಸಿಂಫ್ಟಿ ಅವರು ಮಾಡಿಕೊಂಡ ನಿವೇದನೆಗಳನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಗಮನಕ್ಕೆ ತೆಗೆದುಕೊಂಡಿತು.
ನ್ಯಾ.ಕೆ.ಎಂ.ಜೋಸೆಫ್ (ಈಗ ನಿವೃತ್ತ) ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಕಳೆದ ವರ್ಷದ ಮೇ 18ರಂದು ಜಲ್ಲಿಕಟ್ಟು,ಎತ್ತಿನ ಗಾಡಿಗಳ ಸ್ಪರ್ಧೆ ಮತ್ತು ಕಂಬಳಕ್ಕೆ ಅವಕಾಶ ಕಲ್ಪಿಸಿದ್ದ ತಮಿಳುನಾಡು,ಮಹಾರಾಷ್ಟ್ರ ಮತ್ತು ಕರ್ನಾಟಕ ತಿದ್ದುಪಡಿ ಕಾಯ್ದೆಗಳ ಸಿಂಧುತ್ವವನ್ನು ಎತ್ತಿಹಿಡಿದು ಸರ್ವಾನುಮತದ ತೀರ್ಪನ್ನು ನೀಡಿತ್ತು.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…