ನವದೆಹಲಿ : ಸಂಸದರು ಮತ್ತು ಶಾಸಕರ ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳ ಮೇಲೆ ನಿಗಾ ಇಡಲು ವಿಶೇಷ ಪೀಠ ರಚನೆ ಮಾಡುವಂತೆ ಹಾಗೂ ಪೀಠದ ನೇತೃತ್ವವನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಹಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ತ್ವರಿತ ವಿಲೇವಾರಿಗಾಗಿ ನಿರ್ದೇಶನ ನೀಡಬೇಕು. ಆರು ವರ್ಷಗಳ ನಿಷೇಧಕ್ಕೆ ವಿರುದ್ಧವಾಗಿ ಹಾಲಿ ಶಾಸಕರು ಸೇರಿದಂತೆ ಅಪರಾಧಿ ರಾಜಕಾರಣಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಜೀವಮಾನದ ನಿಷೇಧವನ್ನು ಹೇರುವಂತೆ ವಕೀಲ ಹಾಗೂ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ನೇತೃತ್ವದ ಪೀಠ ವಿಚಾರಣೆ ನಡೆಸಿತು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠವು ಮುಖ್ಯವಾಗಿ ಸಂಸದರು ಅಥವಾ ಶಾಸಕರ ವಿರುದ್ಧ ಮರಣದಂಡನೆ ವಿಧಿಸಬಹುದಾದ ಪ್ರಕರಣಗಳಿಗೆ ಇತರ ಪ್ರಕರಣಗಳಿಗಿಂತ ಹೆಚ್ಚಿನ ಆದ್ಯತೆ ನೀಡಬೇಕು. ಇಂತಹ ಪ್ರಕರಣಗಳ ತ್ವರಿತ ವಿಲೇವಾರಿ ಮಾಡುವಂತೆ ಕೋರ್ಟ್ ನಿರ್ದೇಶಿಸಿದೆ. ಸಂಬಂಧಪಟ್ಟ ಪ್ರಧಾನ ಸೆಷನ್ಸ್ ನ್ಯಾಯಾಧೀಶರು ಅಂತಹ ಪ್ರಕರಣಗಳ ವಿಚಾರಣೆಗೆ ಸಾಕಷ್ಟು ಮೂಲಸೌಕರ್ಯ ಸೌಲಭ್ಯಗಳು ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಇದೇ ವೇಳೆ ಹೇಳಿದೆ.
ಉಪಾಧ್ಯಾಯ ಅವರು ಕಳೆದ ಏಪ್ರಿಲ್‍ನಲ್ಲಿ ಗಂಭೀರ ಅಪರಾಧಗಳಿಗಾಗಿ ಚಾರ್ಜ್‍ಶೀಟ್ ಮಾಡಿದ ವ್ಯಕ್ತಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಮನವಿ ಮಾಡಿದ್ದರು. ಇದು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಟೀಕಿಸಿತ್ತು.
ಹೊಸದಿಲ್ಲಿ : ಮೂರು ದಿನಗಳ ಕಾಲ ಭಾರತ ಪ್ರವಾಸಕ್ಕೆ ಆಗಮಿಸಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ…
ಜನವರಿ ಮೊದಲ ವಾರದ ವೇಳೆಗೆ ಪುನಃ ಶುರುವಾಗಲಿದೆ ಬಂಡಾಯದ ಬಿರುಗಾಳಿ ರಾಜ್ಯ ಕಾಂಗ್ರೆಸ್‌ನ ಗೊಂದಲಕ್ಕೆ ಬ್ರೇಕ್ ಹಾಕಲು ದಿಲ್ಲಿಯ ಕಾಂಗ್ರೆಸ್…
ಚಾಮರಾಜಗರ ಜಿಲ್ಲೆಯ ಪವಿತ್ರ ಯಾತ್ರಾ ಸ್ಥಳವಾದ ಮೇಲೆ ಮಹದೇಶ್ವರ ಬೆಟ್ಟದ ಅಸುಪಾಸಿನಲ್ಲಿ ವಾಸಿಸುವ ಒಡಕಟ್ಟು ಜನರು ಮದ್ಯವ್ಯಸನಿಗಳಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವ…
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…