ರಾಷ್ಟ್ರೀಯ

ರಾಮಕೃಷ್ಣ ಮಿಷನ್ ನ ಸ್ವಾಮಿ ಸ್ಮರಣಾನಂದ ನಿಧನ !

ಕೋಲ್ಕತ್ತ: ರಾಮಕೃಷ್ಣ ಮಿಷನ್ ನ 16ನೇ ಅಧ್ಯಕ್ಷರಾಗಿದ್ದ ಸ್ವಾಮಿ ಸ್ಮರಣಾನಂದ (95) ಇಂದು ನಿಧನರಾಗಿದ್ದಾರೆ.

2017 ರಲ್ಲಿ ರಾಮಕೃಷ್ಣ ಮಿಷನ್ ಗೆ 16 ನೇ ಅಧ್ಯಕ್ಷರಾಗಿ ಸ್ಮರಣಾನಂದ ನಿಯುಕ್ತರಾಗಿದ್ದರು.

ಸ್ವಾಮಿ ಸ್ಮರಣಾನಂದ ಜಿ ಮಹಾರಾಜರು, ಅಧ್ಯಕ್ಷರು ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್ ಇಂದು ರಾತ್ರಿ 8:14 ರ ವೇಳೆಗೆ ಮಹಾಸಮಾಧಿ ಹೊಂದಿದ್ದಾರೆ ಎಂದು ಮಠದ ಆಡಳಿತ ವರ್ಗ ಹೇಳಿಕೆಯಲ್ಲಿ ತಿಳಿಸಿದೆ.

ಮೂತ್ರನಾಳದ ಸೋಂಕಿನಿಂದ ಸ್ಮರಣಾನಂದ ಸ್ವಾಮಿ ಅವರನ್ನು ರಾಮಕೃಷ್ಣ ಮಿಷನ್ ಸೇವಾ ಪ್ರತಿಷ್ಠಾನ ಕ್ಕೆ ಜ.29 ರಂದು ದಾಖಲಿಸಲಾಗಿತ್ತು.  ನಂತರ ಅವರಿಗೆ ಉಸಿರಾಟದ ವೈಫಲ್ಯ ಎದುರಾಗಿತ್ತು. ಅದಕ್ಕಾಗಿ ಅವರನ್ನು ಮಾರ್ಚ್ 3 ರಂದು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

2 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

3 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

4 hours ago

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

10 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

10 hours ago