Mysore
20
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಟಿ೨೦ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆ!

ನವದೆಹಲಿ: ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎನಲ್ಲಿ ನಡೆಯಲಿರುವ ಬಹು ನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಟಿಸಿದೆ.

2024ರ ಐಸಿಸಿ ಟಿ20 ವಿಶ್ವಕಪ್‌ನ ಉದ್ಘಾಟನಾ ಪಂದ್ಯದಲ್ಲಿ ಜೂನ್ 1ರಂದು ಸಹ-ಆತಿಥೇಯ ಯುಎಸ್‌ಎ ತಂಡವು ಕೆನಡಾ ತಂಡವನ್ನು ಎದುರಿಸುವುದರೊಂದಿಗೆ ಚಾಲನೆ ಸಿಗಲಿದೆ.

ಇನ್ನು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ  ತಂಡಗಳ ನಡುವಿನ ಬಹು ನಿರೀಕ್ಷಿತ ಪಂದ್ಯವು ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

2024ರ ಟಿ20 ವಿಶ್ವಕಪ್ ಗುಂಪು ಹಂತಗಳಲ್ಲಿ ಭಾರತ ತಂಡದ ವೇಳಾಪಟ್ಟಿ

  • ಜೂನ್ 5: ಭಾರತ vs ಐರ್ಲೆಂಡ್ (ನ್ಯೂಯಾರ್ಕ್)
  • ಜೂನ್ 9: ಭಾರತ vs ಪಾಕಿಸ್ತಾನ (ನ್ಯೂಯಾರ್ಕ್)
  • ಜೂನ್ 12: ಭಾರತ vs ಯುಎಸ್‌ಎ (ನ್ಯೂಯಾರ್ಕ್)
  • ಜೂನ್ 15: ಭಾರತ vs ಕೆನಡಾ (ಫ್ಲೋರಿಡಾ)

ಇನ್ನು ಭಾರತ ತಂಡವು 2024ರ ಟಿ20 ವಿಶ್ವಕಪ್ ಸಮಯದಲ್ಲಿ ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಇದಕ್ಕೂ ಮುನ್ನ ಆರಂಭಿಕ ಪಂದ್ಯದಲ್ಲಿ ಐರ್ಲೆಂಡ್‌ ತಂಡದ ವಿರುದ್ಧ ಸೆಣಸಾಡಲಿದೆ.

ಎರಡನೇ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲಲು ಬಯಸಿರುವ ಟೀಮ್ ಇಂಡಿಯಾ ತಮ್ಮ ಗುಂಪು ಪಂದ್ಯಗಳನ್ನು ಯುಎಸ್‌ಎನಲ್ಲಿ ಆಡಲಿದೆ. ಸೂಪರ್ 8 ಪಂದ್ಯಗಳನ್ನು ಅರ್ಹತೆ ಪಡೆದರೆ ವೆಸ್ಟ್ ಇಂಡೀಸ್‌ನಲ್ಲಿ ಆಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಭಾರತ ತಂಡವು ತನ್ನ ಟಿ20 ವಿಶ್ವಕಪ್ ಅಭಿಯಾನವನ್ನು ಆರಂಭಿಸಲು ಜೂನ್ 5ರಂದು ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದ ನಂತರ, ಭಾರತವು ಜೂನ್ 12ರಂದು ನ್ಯೂಯಾರ್ಕ್‌ನಲ್ಲಿ ಯುಎಸ್‌ಎ ತಂಡವನ್ನು ಎದುರಿಸಲಿದೆ ಮತ್ತು ಫ್ಲೋರಿಡಾದಲ್ಲಿ ತಮ್ಮ ಅಂತಿಮ ಗುಂಪು ಹಂತದ ಪಂದ್ಯದಲ್ಲಿ ಕೆನಡಾ ತಂಡದ ವಿರುದ್ಧ ಮುಖಾಮುಖಿಯಾಗಲಿದೆ.

2024ರ ಟಿ20 ವಿಶ್ವಕಪ್ ಪಂದ್ಯಾವಳಿಯ ಎರಡು ಸೆಮಿಫೈನಲ್ ಪಂದ್ಯಗಳು ಜೂನ್ 26 ಮತ್ತು 27ರಂದು ನಡೆಯಲಿದ್ದರೆ, ಜೂನ್ 29ರಂದು ವೆಸ್ಟ್ ಇಂಡೀಸ್‌ನ ಬಾರ್ಬಡೋಸ್‌ನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ