ನವದೆಹಲಿ: ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎನಲ್ಲಿ ನಡೆಯಲಿರುವ ಬಹು ನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪ್ರಕಟಿಸಿದೆ.
2024ರ ಐಸಿಸಿ ಟಿ20 ವಿಶ್ವಕಪ್‌ನ ಉದ್ಘಾಟನಾ ಪಂದ್ಯದಲ್ಲಿ ಜೂನ್ 1ರಂದು ಸಹ-ಆತಿಥೇಯ ಯುಎಸ್‌ಎ ತಂಡವು ಕೆನಡಾ ತಂಡವನ್ನು ಎದುರಿಸುವುದರೊಂದಿಗೆ ಚಾಲನೆ ಸಿಗಲಿದೆ.
ಇನ್ನು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಬಹು ನಿರೀಕ್ಷಿತ ಪಂದ್ಯವು ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.
ಇನ್ನು ಭಾರತ ತಂಡವು 2024ರ ಟಿ20 ವಿಶ್ವಕಪ್ ಸಮಯದಲ್ಲಿ ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಇದಕ್ಕೂ ಮುನ್ನ ಆರಂಭಿಕ ಪಂದ್ಯದಲ್ಲಿ ಐರ್ಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ.
ಎರಡನೇ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲಲು ಬಯಸಿರುವ ಟೀಮ್ ಇಂಡಿಯಾ ತಮ್ಮ ಗುಂಪು ಪಂದ್ಯಗಳನ್ನು ಯುಎಸ್‌ಎನಲ್ಲಿ ಆಡಲಿದೆ. ಸೂಪರ್ 8 ಪಂದ್ಯಗಳನ್ನು ಅರ್ಹತೆ ಪಡೆದರೆ ವೆಸ್ಟ್ ಇಂಡೀಸ್‌ನಲ್ಲಿ ಆಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
2024ರ ಟಿ20 ವಿಶ್ವಕಪ್ ಪಂದ್ಯಾವಳಿಯ ಎರಡು ಸೆಮಿಫೈನಲ್ ಪಂದ್ಯಗಳು ಜೂನ್ 26 ಮತ್ತು 27ರಂದು ನಡೆಯಲಿದ್ದರೆ, ಜೂನ್ 29ರಂದು ವೆಸ್ಟ್ ಇಂಡೀಸ್‌ನ ಬಾರ್ಬಡೋಸ್‌ನಲ್ಲಿ ಫೈನಲ್ ಪಂದ್ಯ ನಡೆಯಲಿದೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…