ಚೆನ್ನೈ: ತಮಿಳುನಾಡಿನ ದಕ್ಷಿಣ ತೂತುಕುಡಿ ಜಿಲ್ಲೆಯಲ್ಲಿ ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದ ನವವಿವಾಹಿತ ದಂಪತಿ ಹತ್ಯೆಗೀಡಾಗಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಇವರಿಬ್ಬರು ಪ್ರೇಮ ವಿವಾಹವಾಗಿದ್ದರು.
ದಂಪತಿಯನ್ನು 24 ವರ್ಷದ ವಿ ಮರಿಸೆಲ್ವಂ ಮತ್ತು 20 ವರ್ಷದ ಎಂ ಕಾರ್ತಿಗ ಎಂದು ಗುರುತಿಸಲಾಗಿದೆ. ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು ಪರಸ್ಪರ ಪ್ರೀತಿಸುತ್ತಿದ್ದರು. ಹುಡುಗಿಯ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದಾಗಿ ಅಕ್ಟೋಬರ್ 30ರಂದು ಮರಿಸೆಲ್ವಂ ಅವರೊಂದಿಗೆ ಎಂ ಕಾರ್ತಿಗ ಕೋವಿಲ್ಪಟ್ಟಿಗೆ ತೆರಳಿದ್ದರು. ಅದೇ ದಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹವಾದ ಅವರು ಬುಧವಾರದವರೆಗೆ ಕೋವಿಲ್ಪಟ್ಟಿಯಲ್ಲಿ ಇದ್ದರು.
ಮರಿಸೆಲ್ವಂ ಗುರುವಾರ ಕಾರ್ತಿಗಾ ಅವರೊಂದಿಗೆ ಮುರುಗೇಶನ್ ನಗರದಲ್ಲಿರುವ ಅವರ ಮನೆಗೆ ಬಂದಾಗ, ಅವರ ಪೋಷಕರು ಅವರನ್ನು ಒಪ್ಪಿಕೊಂಡರು ಎಂದು ತಮಿಳುನಾಡು ಪೊಲೀಸರು ತಿಳಿಸಿದ್ದಾರೆ. ತಂದೆ-ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಮೂರು ದ್ವಿಚಕ್ರವಾಹನದಲ್ಲಿ ಬಂದಿದ್ದ ಆರು ಮಂದಿಯ ತಂಡ ಸಂಜೆ ವೇಳೆ ಅವರ ಮನೆಗೆ ನುಗ್ಗಿ ದಂಪತಿಯನ್ನು ಕೊಂದು ಸ್ಥಳದಿಂದ ಪರಾರಿಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತೂತುಕುಡಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಭೀಕರ ಹತ್ಯೆಯಲ್ಲಿ ಯುವತಿಯ ಕುಟುಂಬದ ಕೈವಾಡ ಇರಬಹುದು ಎಂದು ತಮಿಳುನಾಡು ಪೊಲೀಸರು ಶಂಕಿಸಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಶೋಕಾಚರಣೆಯ ಅಲೆ ಎದ್ದಿದ್ದು, ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಎಲ್ ಬಾಲಾಜಿ ಸರವಣನ್ ಭೇಟಿ ನೀಡಿ, ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…