ತಮಿಳುನಾಡು: ನಟ ಹಾಗೂ ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್(71) ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂಧ ಬಳಲುತ್ತಿದ್ದ ವಿಜಯಕಾಂತ್ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತಪಟ್ಟಿದ್ದಾರೆ.
ಇಂದು ಮುಂಜಾನೆ ವಿಜಯಕಾಂತ್ ಕೊನೆ ಉಸಿರೆಳೆದಿದ್ದಾರೆ ಎಂದು ಆಸ್ಪತ್ರೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಡಿಎಂಡಿಕೆ ಪಕ್ಷದ ಮುಖಂಡರು ವಿಜಯಕಾಂತ್ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದರು. ಶೀಘ್ರವೇ ಮನೆಗೆ ಮರಳಲಿದ್ದಾರೆ’ ಎಂದು ತಿಳಿಸಿದ್ದರು.
ಆ ಬಳಿಕ ಅವರಿಗೆ ಕೊವಿಡ್ ಇರುವ ವಿಚಾರ ದೃಢವಾಯಿತು. ಚಿಕಿತ್ಸೆಗೆ ಫಲಕಾರಿಯಾಗದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಆಡಳಿತಮಂಡಳಿ ತಿಳಿಸಿದ್ದಾರೆ.
ತಮಿಳೂನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೇರಿದಂತೆ ವಿವಿಧ ರಾಜಕೀಪಕ್ಷದ ನಾಯಕರು ಹಾಗೂ ಚಿತ್ರರಂಗದ ಗಣ್ಯರು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.