Mysore
23
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ತೆಲಂಗಾಣ: ಪ್ರಧಾನಿ ಮೋದಿ ಬೆಂಬಲಕ್ಕೆ ನಿಂತ ನಟ ಪವನ್ ಕಲ್ಯಾಣ್

ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷದೊಂದಿಗೆ ಬಿಜೆಪಿ ಸಖ್ಯ ಮುಂದುವರೆದಿದೆ. ತೆಲಂಗಾಣದಲ್ಲಿ ಬಿಜೆಪಿ ಹೆಜ್ಜೆಗುರುತು ಮೂಡಿಸುವ ಹುಮ್ಮಸ್ಸಿನಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪವನ್ ಕಲ್ಯಾಣ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೂಲಕ ಉಭಯ ಪಕ್ಷಗಳ ನಡುವಿನ ಮೈತ್ರಿ ಮುಂದುವರೆಯಲಿದೆ ಎಂಬ ಸೂಚನೆ ನೀಡಿದ್ದಾರೆ.

ತೆಲಂಗಾಣದಲ್ಲಿ ಜನಸೇನಾ ಪಕ್ಷಕ್ಕೆ ಎಂಟು ಸ್ಥಾನಗಳನ್ನು ನೀಡಲಾಗಿದೆ ಅಲ್ಲಿ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷವು ರೇಸ್‍ನಲ್ಲಿ ಇರುವುದಿಲ್ಲ. ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ಇಲ್ಲಿಯವರೆಗೆ ರಾಜಕಾರಣದಲ್ಲಿ ಅಂತಹ ದೊಡ್ಡ ಪ್ರಭಾವ ಬೀರಿಲ್ಲ, ಆದರೂ ಕೆ ಚಂದ್ರಶೇಖರ್ ರಾವ್ ಅವರ ಭಾರತ ರಾಷ್ಟ್ರ ಸಮಿತಿಯಿಂದ ಆಳ್ವಿಕೆ ನಡೆಸುತ್ತಿರುವ ರಾಜ್ಯದಲ್ಲಿ ನಟನ ದೊಡ್ಡ ಅಭಿಮಾನಿ ಬಳಗವನ್ನು ಸೆಳೆಯಲು ಬಿಜೆಪಿ ಆಶಿಸುತ್ತಿದೆ.

ಪವನ್ ಕಲ್ಯಾಣ್ ಆಂಧ್ರಪ್ರದೇಶದಲ್ಲಿ ನಾಯ್ಡು ಅವರೊಂದಿಗೆ ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ. ಆದರೆ ಟಿಡಿಪಿ ಮುಖ್ಯಸ್ಥರು 2018 ರ ಒಕ್ಕೂಟದಿಂದ ಹೊರನಡೆಯುವ ನಿರ್ಧಾರದ ನಂತರ ಮತ್ತೆ ಎನ್‍ಡಿಎ ಬಣದಲ್ಲಿ ಗುರುತಿಸಿಕೊಂಡಿಲ್ಲ.

ಆದರೆ ಇದು ಪವನ್ ಕಲ್ಯಾಣ್ ಅವರ ಬಿಜೆಪಿ ಜೊತೆಗಿನ ಸಂಬಂಧದ ಮೇಲೆ ಪರಿಣಾಮ ಬೀರಿಲ್ಲ. ಇಂದು ಹೈದರಾಬಾದ್‍ನಲ್ಲಿ ನಡೆದ ಸಭೆಯಲ್ಲಿ, ಜನಸೇನಾ ಪಕ್ಷದ ಮುಖ್ಯಸ್ಥರು, ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಪ್ರಧಾನಿ ಮೋದಿಯವರ ಕಠಿಣತೆ ಮತ್ತು ಚುನಾವಣಾ ಲಾಭಗಳನ್ನು ಮಾತ್ರ ನೋಡದೆ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕಾಗಿ ನಾನು ಇಷ್ಟಪಡುತ್ತೇನೆ ಎಂದು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!