ಹೈದರಾಬಾದ್ : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಾಲಿಗೆ ಗ್ಯಾರೆಂಟಿಗಳು ಗೆಲುವು ನೀಡಿದ್ದು, ಗ್ಯಾರೆಂಟಿಗಳ ಮೂಲಕ ಗೆಲುವು ಸಾಧಿಸಿ ಬಿಜೆಪಿಗೆ ಮುಖಭಂಗ ಉಂಟುಮಾಡಿತ್ತು. ಅದೇ ರಣತಂತ್ರವನ್ನು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಪ್ರಯೋಗಿಸಲು ಕಾಂಗ್ರೆಸ್ ಮುಂದಾಗಿದ್ದು, ಪ್ರಮುಖ 6 ಗ್ಯಾರೆಂಟಿಗಳನ್ನು ಘೋಷಿಸಿದೆ.
ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ತೆಲಂಗಾಣ ಚುನಾವಣೆಯಲ್ಲಿ 6 ಗ್ಯಾರೆಂಟಿಗಳನ್ನು ಘೋಷಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರೆಂಟಿಗಳನ್ನು ಘೋಷಿಸಿ, ಅವುಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ. ಇದೇ ರೀತಿಯಲ್ಲಿ ತೆಲಂಗಾಣದ ಮತದಾರರನ್ನು ಸೆಳೆಯಲು ಗ್ಯಾರೆಂಟಿ ಅಸ್ತ್ರ ಪ್ರಯೋಗಿಸಿದ್ದಾರೆ. ಸ್ಟಾರ್ ಪ್ರಚಾರಕರ ದಂಡೇ ತೆಲಂಗಾಣದತ್ತ ಮುಖ ಮಾಡಿದ್ದು, ಕರ್ನಾಟಕ ಮಾದರಿಯಲ್ಲಿ ರೋಡ್ ಶೋ, ಹಲವಾರು ನಾಯಕ ಸಭೆಗಳನ್ನು ಆಯೋಜಿಸಿದ್ದಾರೆ. ರಾಜ್ಯದಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ರನ್ನು ಚುನಾವಣೆಗೆ ಪ್ರಚಾರಕರನ್ನಾಗಿ ಬಳಸಿಕೊಳ್ಳಲಾಗಿದೆ.
ಕಾಂಗ್ರೆಸ್ ಗ್ಯಾರೆಂಟಿಗಳು
ಗ್ಯಾರಂಟಿ 1 – ಪ್ರತಿ ತಿಂಗಳು ಅತ್ತೆಗೆ 4,000 ರೂ., ಸೊಸೆಗೆ 2,500 ರೂ.
ಗ್ಯಾರಂಟಿ 2 – ಪ್ರತಿ ಹೆಣ್ಣುಮಗುವಿನ ಖಾತೆಗೆ ಪ್ರತಿ ತಿಂಗಳು 2,500 ರೂ. (ಮಹಾಲಕ್ಷ್ಮಿ ಯೋಜನೆ)
ಗ್ಯಾರಂಟಿ 3 – ಪಿಂಚಣಿ ಮೊತ್ತ 2,000 ರೂ.ನಿಂದ 4,000 ರೂ.ಗೆ ಹೆಚ್ಚಳ
ಗ್ಯಾರಂಟಿ 4 – 500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್
ಗ್ಯಾರಂಟಿ 5 – ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೆರವು
ಗ್ಯಾರಂಟಿ 6 – ಬಡವರಿಗೆ 200 ಯೂನಿಟ್‍ವರೆಗೂ ಉಚಿತ ವಿದ್ಯುತ್
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…