Mysore
29
scattered clouds

Social Media

ಶುಕ್ರವಾರ, 15 ಮೇ 2026
Light
Dark

ಮಾಜಿ ಸಿಎಂ ಆರೋಗ್ಯ ವಿಚಾರಿಸಿದ ನೂತನ ಸಿಎಂ

ಹೈದರಾಬಾದ್‌: ಜಾರಿಬಿದ್ದು ಸೊಂಟ ಫ್ಯಾಕ್ಚರ್‌ ಆದ ಕಾರಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ತೆಲಂಗಾಣ ಮಾಜಿ ಸಿಎಂ ಕೆ.ಚೆಂದ್ರಶೇಖರ್‌ ರಾವ್‌ ಅವರ ಆರೋಗ್ಯವನ್ನು ನೂತನ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಆಸ್ಪತ್ರೆಯಲ್ಲಿ ಬೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು, ಇಲ್ಲಿನ ಯಶೋಧ ಆಸ್ಪತ್ರೆಯಲ್ಲಿ ಮೂಳೆ ಜೋಡಣೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಹಾಗೂ ಬಿಆರ್ ಎಸ್ ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರನ್ನು ಹಾಲಿ ಸಿಎಂ ರೇವಂತ್ ರೆಡ್ಡಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು, ಇಲ್ಲಿನ ಯಶೋಧ ಆಸ್ಪತ್ರೆಯಲ್ಲಿ ಮೂಳೆ ಜೋಡಣೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರು. ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ. ಚೇತರಿಸಿಕೊಳ್ಳಲು ಆರರಿಂದ ಎಂಟು ವಾರಗಳು ಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!