ಹೊಸದಿಲ್ಲಿ: ಸಂವಿಧಾನ ಪೀಠಿಕೆಯ ಸಮಾಜವಾದಿ(ಸೋಶಿಯಲಿಸ್ಟ್) ಹಾಗೂ ಜಾತ್ಯತೀತ (ಸೆಕ್ಯೂಲರ್) ಪದಗಳನ್ನು ತೆಗೆದು ಹಾಕಲು ಸಾಧ್ಯವಿಲ್ಲ. ಸಂಸತ್ತಿನ ತಿದ್ದುಪಡಿ ಅಧಿಕಾರವು ಸಂವಿಧಾನ ಪೀಠಿಕೆಗೂ ವಿಸ್ತರಿಸುತ್ತದೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಹಿರಿಯ ಬಿಜೆಪಿ ನಾಯಕರಾದ ಡಾ.ಸುಬ್ರಮಣಿಯನ್ ಸ್ವಾಮಿ, ಬಲರಾಮ್ ಸಿಂಗ್ ಹಾಗೂ ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಂವಿಧಾನ ಪೀಠಿಕೆಯಲ್ಲಿರುವ ಸಮಾಜವಾದಿ ಹಾಗೂ ಜಾತ್ಯತೀತ ಪದಗಳ ಸೇರ್ಪಡೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಇಂದು (ನ.25) ವಿಚಾರಣೆ ನಡೆಸಿದ ಸಿಜೆಐನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಪಿ.ವಿ.ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ನ್ಯಾಯಪೀಠವೂ ಸಂವಿಧಾನದ 368ನೇ ವಿಧಿಯ ಅಡಿಯಲ್ಲಿ ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂಸತ್ತಿನ ʼಅವಿವಾದಾತೀತʼ ಅಧಿಕಾರ
ಸಂವಿಧಾನದ ಪೀಠಿಕೆಗೂ ವಿಸ್ತರಿಸುವ ಕಾರಣ ಈ ಪದಗಳನ್ನು ತೆಗೆದು ಹಾಕಲು ಸಾಧ್ಯವಿಲ್ಲ ಎಂದು ಪುನರುಚ್ಚಾರ ಮಾಡಿ ಅರ್ಜಿಯನ್ನು ವಜಾಗೊಳಿಸಿದೆ.
ಇನ್ನು 1976ರಲ್ಲಿ ಅಂದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರು ಭಾರತ ಸಂವಿಧಾನಕ್ಕೆ 42ನೇ ತಿದ್ದುಪಡಿಯ ಮೂಲಕ ಸಮಾಜವಾದಿ ಹಾಗೂ ಜ್ಯಾತತೀತ ಪದಗಳನ್ನು ಸೇರಿಸಿದ್ದಾರೆ. ಈ ಪದಗಳು ಸಂವಿಧಾನ ಪೀಠಿಕೆಯ 1949ರ ನವೆಂಬರ್ 26ರ ದಿನಾಂಕದ ಮೂಲವನ್ನು ಒಳಗೊಂಡಿದೆ. ಅಲ್ಲದೇ ಈ ಪದಗಳನ್ನು ಸ್ವೀಕರಿಸಿದ ದಿನಾಂಕವು ಸಂವಿಧಾನದ 368ನೇ ವಿಧಿಯ ಅಡಿಯಲ್ಲಿ ಅಧಿಕಾರವನ್ನು ಮೊಟಕುಗೊಳಿಸುವುದಿಲ್ಲ ಅಥವಾ ನಿರ್ಬಂಧಿಸುವುದಿಲ್ಲ. ಹೀಗಾಗಿ ಅವುಗಳನ್ನು ತೆಗೆದು ಹಾಕಲು ಸಾಧ್ಯವಿಲ್ಲ ಎಂದು ಆದೇಶ ಹೊರಡಿಸಿದೆ.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…