ನವದೆಹಲಿ: ಕಾಂಗ್ರೆಸ್ ನಾಯಕ ಶಶಿ ತರೂರ್ ಕೆಲಸಕ್ಕೆ ಹೋಗುವ, ಮುಟ್ಟಾದ ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆ ಕೊಡಬೇಕು ಎಂಬ ಹೇಳಿಕೆಗೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ಕೊಟ್ಟಿದ್ದಾರೆ.
ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಮೃತಿ ಇರಾನಿ, ಮುಟ್ಟು ಮಹಿಳೆಯರ ಕೆಲಸಕ್ಕೆ ಎಂದಿಗೂ ಅಡ್ಡಿಯಾಗುವುದಿಲ್ಲ. ಅದು ಮಹಿಳೆಯರ ಜೀವನದ ಒಂದು ಭಾಗ ಮತ್ತು ಸಹಜ ಕ್ರಿಯೆ. ಇದಕ್ಕೆಲ್ಲ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದಿದ್ದಾರೆ.
ಅಲ್ಲದೇ, ವೇತನ ಸಹಿತ ಮುಟ್ಟಿನ ರಜೆ ನೀಡಬೇಕು ಎಂದು ಎಲ್ಲಿಂದಲೂ ಸರ್ಕಾರದ ಪರಿಗಣನೆಗೆ ಬಂದಿಲ್ಲ. ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವ ಯೋಜನೆಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.
ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ, ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…
ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…
ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…