ರಾಷ್ಟ್ರೀಯ

ನಮ್ಮ ತ್ಯಾಗ ಮತ್ತು ತಪಸ್ಸಿನಲ್ಲಿ ಏನಾದರೂ ಕೊರತೆಯಿರಬೇಕು ಹೀಗಾಗಿ ರಾಮ ಮಂದಿರ ಕಟ್ಟಲಾಗಿರಲಿಲ್ಲ: ಮೋದಿ

ಅಯೋಧ್ಯೆ: ಈ ಕ್ಷಣ ಅತ್ಯಂತ ಪವಿತ್ರವಾದದ್ದು. 2024 ರ ಜನವರಿ 22 ಇದು ಕೇವಲ ದಿನಾಂಕ ಅಲ್ಲ, ಹೊಸ ಕಾಲಚಕ್ರದ ಉದಯ. ಗುಲಾಮಿ ಮನಸ್ಥಿತಿಯನ್ನು ಎದುರಿಸಿ ನಮ್ಮ ರಾಷ್ಟ್ರ ಎದ್ದು ನಿಂತ ಕ್ಷಣವಿದು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮ ಮಂದಿರವನ್ನು ಉದ್ಘಾಟಿಸಿ, ಬಾಲರಾಮನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾ ನೆರವೇರಿಸಿ ಪ್ರಧಾನಿ ಮೋದಿ ಮಾತನಾಡಿದ ಅವರು, ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸದ ಉದಯವಾಗಲಿದೆ. ದೇಶದಲ್ಲಿ ಇಂದು ಪ್ರತಿದಿನವೂ ಒಂದು ವಿಶ್ವಾಸ ಮೂಡುತ್ತಿದೆ. ಈ ಕ್ಷಣ ದೈವಿಕ ಅನುಭವವನ್ನು ಪಡೆಯುತ್ತಿದ್ದೇನೆ ಎಂದರು.

ನಾನಿಂದು ಭಗವಾನ್ ಶ್ರೀರಾಮನಲ್ಲಿ ಕ್ಷಮೆಯಾಚಿಸುತ್ತೇನೆ. ಏಕೆಂದರೆ, ನಮ್ಮ ಪ್ರಯತ್ನ, ತ್ಯಾಗ ಮತ್ತು ತಪಸ್ಸಿನಲ್ಲಿ ಏನಾದರೂ ಕೊರತೆಯಿರಬೇಕು. ಹೀಗಾಗಿ ಇಷ್ಟು ಶತಮಾನಗಳಿಂದ ರಾಮ ಮಂದಿರ ನಿರ್ಮಾಣ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಆದರೆ, ಆ ಕೆಲಸ ಇಂದು ಪೂರ್ಣಗೊಂಡಿದೆ ಎಂದು  ಹೇಳಿದರು.

ಭಗವಾನ್ ರಾಮನ ಅಸ್ತಿತ್ವಕ್ಕಾಗಿ ದಶಕಗಳ ಕಾಲ ಕಾನೂನು ಹೋರಾಟ ನಡೆಯಿತು. ನ್ಯಾಯ ಸಲ್ಲಿಸಿದ ಭಾರತದ ನ್ಯಾಯಾಂಗಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಇಂದು ನಮ್ಮ ರಾಮ ಬಂದಿದ್ದಾನೆ. ಅನೇಕ ಜನರ ತ್ಯಾಗ, ಬಲಿದಾನ, ಶ್ರಮದ ಫಲವಾಗಿ ಪ್ರಭು ಶ್ರೀರಾಮ ಚಂದ್ರ ಮತ್ತೆ ಬಂದಿದ್ದಾನೆ. ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ.

ಈ ಶುಭ ಘಳಿಗೆ ಹಿನ್ನೆಲೆ ಎಲ್ಲರಿಗೂ ಶುಭಾಶಯ. ಹೇಳಲು ಎಷ್ಟೊಂದು ವಿಷಯಗಳು ಇವೆ. ಆದರೆ, ಮಾತುಗಳೇ ಹೊರಳದೇ ನನ್ನ ಕಂಠ ತುಂಬಿ ಬರುತ್ತಿದೆ. ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್​​ ನಲ್ಲಿ ಇರಲ್ಲ, ನಮ್ಮ ರಾಮ ಲಲ್ಲಾ ದಿವ್ಯ ಮಂದಿರದಲ್ಲಿ ಇರಲಿದ್ದಾನೆ ಎಂದು ಪ್ರಧಾನಿ ಮೋದಿ ಹೇಳಿದರು.

ಕಾಲ ಚಕ್ರ ಬದಲಾಗುತ್ತಿರುವುದು ನನಗೆ ಗೊತ್ತಿದೆ. ಬದಲಾದ ಕಾಲಚಕ್ರದ ಶಿಲ್ಪಿಗಳಾಗಿ ನಾವು ಆಯ್ಕೆಯಾಗಿದ್ದೇವೆ. ಮುಂದಿನ ಸಾವಿರಾರು ವರ್ಷದ ಅಡಿಪಾಯ ಈಗ ಹಾಕಬೇಕು.  ಸಮಸ್ತ ಸಕ್ಷಮ, ಭವ್ಯ ದಿವ್ಯ ಭಾರತ ನಿರ್ಮಾಣದ ಪ್ರಮಾಣ ಮಾಡೋಣ  ಎಂದು ಪ್ರಧಾನಿ ಮೋದಿ ತಿಳಿಸಿದರು.

ಕೇವಲ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅಲ್ಲ. ದೇಶದ ಸಾಂಸ್ಕೃತಿಕ ಮೌಲ್ಯಗಳ ಪ್ರಾಣ ಪ್ರತಿಷ್ಠೆಯಾಗಿದೆ. ರಾಮಮಂದಿರ ರಾಷ್ಟ್ರಚೇತನದ ಮಂದಿರ. ರಾಮ ಭಾರತದ ಆತ್ಮ ಚೇತನ,  ಚಿಂತನ ರಾಮ ನೀತಿಯೂ ಹೌದು ಎಂದು ಹೇಳಿದರು.

andolanait

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

15 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

17 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

23 hours ago