ತಿರುಪತಿ : ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಉದ್ಘಾಟನೆಗೆ ತಿರುಪತಿಯಿಂದ 1 ಲಕ್ಷ ಲಾಡುಗಳನ್ನು ಪೂರೈಸಲಾಗುವುದು ಎಂದು ಟಿಟಿಡಿ ಆಡಳಿತಾಧಿಕಾರಿ ತಿಳಿಸಿದ್ದಾರೆ.
ರಾಮಮಂದಿರ ಉದ್ಘಾಟನೆಗೆ ಆಗಮಿಸುವ ಭಕ್ತಾದಿಗಳಿಗೆ ಹಂಚಲು ಈ ಲಾಡುಗಳನ್ನು ನೀಡಲಾಗುತ್ತಿದ್ದು, ಪ್ರತಿ ಲಾಡು 25 ಗ್ರಾಂ ಇರಲಿದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ. ಧರ್ಮ ರೆಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಿರುಪತಿಗೆ 10 ದಿನದಲ್ಲಿ ₹40 ಕೋಟಿ ಕಾಣಿಕೆ : ವೈಕುಂಠ ಏಕಾದಶಿ ಸಂದರ್ಭದಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ 10 ದಿನಗಳ ಕಾಲ ವೈಕುಂಠದ್ವಾರ ದರ್ಶನ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ₹40 ಕೋಟಿ ಹಣ ಕಾಣಿಕೆಯಾಗಿ ಬಂದಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಅಧಿಕಾರಿ ತಿಳಿಸಿದ್ದಾರೆ.
ಟಿಟಿಡಿಯು 36 ಲಕ್ಷ ಲಾಡುಗಳನ್ನು ಮಾರಾಟ ಮಾಡಿದೆ. 2 ಲಕ್ಷಕ್ಕೂ ಹೆಚ್ಚು ಭಕ್ತರು ಮುಡಿ ಅರ್ಪಿಸಿದ್ದಾರೆ. ದಾಖಲೆಯ ಸಂಖ್ಯೆಯಲ್ಲಿ 6.47 ಲಕ್ಷ ಭಕ್ತರು ವೈಕುಂಠದ್ವಾರ ದರ್ಶನ ಪಡೆದರು ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ. ಧರ್ಮ ರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…