ರಾಷ್ಟ್ರೀಯ

ಅಯೋಧ್ಯೆಗೆ ಬರಲು ಹಿಂದೇಟು ಹಾಕುತ್ತಿದ್ದವರು ಆಹ್ವಾನ ಬಯಸುತ್ತಿದ್ದಾರೆ : ಯೋಗಿ

ಉತ್ತರಪ್ರದೇಶ : ಈ ಮೊದಲು ಅಯೋಧ್ಯೆಗೆ ಬರಲು ಹಿಂದೇಟು ಹಾಕುತ್ತಿದ್ದವರು, ಈಗ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಯಸುತ್ತಿದ್ದಾರೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಮಥುರಾದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಅಯೋಧ್ಯೆಗೆ ಬರಲು ಹಿಂದೇಟು ಹಾಾಕುತ್ತಿದ್ದವರು, ಈಗ ಈ ಸಮಾರಂಭಕ್ಕೆ ಆಹ್ವಾನ ಬಯಸುತ್ತಿದ್ದಾರೆ. ಅಲ್ಲದೇ, ರಾಮಮಂದಿರ ಉದ್ಘಾಟನೆಗೆ ನಮಗೆ ಇನ್ನೂ ಆಹ್ವಾನ ಬಂದಿಲ್ಲವೆಂದು ಬೇಸರಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಹೀಗೆ ಮಾತು ಮುಂದುವರಿಸಿ ಯುಪಿ ಸಿಎಂ ಯೋಗಿ ಆದಿತ್ಯನಾಥ್, ಅಯೋಧ್ಯೆ ದೇವಸ್ಥಾನದ ಸುತ್ತಮುತ್ತಲು ನಡೆದಿರುವ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ.

ಹಲವು ವರ್ಷಗಳ ಹಿಂದೆ, ರಾಮಾಯಣದಲ್ಲಿ ವಿಮಾನವನ್ನು ಉಲ್ಲೇಖಿಸಲಾಗಿತ್ತು. ಪುಷ್ಪಕ ವಿಮಾನದಲ್ಲಿ ರಾಮ ಅಯೋಧ್ಯೆಗೆ ಬಂದ ಎನ್ನಲಾಗಿತ್ತು. ಇದೀಗ ಅಯೋಧ್ಯೆಯಲ್ಲಿ ಏರ್ಪೋರ್ಟ್ ಉದ್ಘಾಟನೆಯಾಗಿದೆ. ಅದಕ್ಕೆ ನಾವು ಮಹರ್ಷಿ ವಾಲ್ಮೀಕಿ ಏರ್ಪೋರ್ಟ್ ಎಂದು ನಾಮಕರಣ ಮಾಡಿದ್ದೇವೆ ಎಂದಿದ್ದಾರೆ.

ಅಲ್ಲದೇ, ನೀವು ಅಯೋಧ್ಯೆಗೆ ಬಂದರೆ, ತ್ರೇತಾಯುಗಕ್ಕೆ ಮರಳಿದಂತೆ ನಿಮಗೆ ಭಾಸವಾಗುತ್ತದೆ ಎಂದಿದ್ದಾರೆ. ಇನ್ನು ರೈಲ್ವೆ ನಿಲ್ದಾಣ ಉದ್ಘಾಟನೆಯಾಗಿದ್ದು, ಜಲ ಸಂಪರ್ಕದ ಬಗ್ಗೆಯೂ ಯೋಚಿಸಲಾಗಿದೆ ಎಂದಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago