ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ( ಜನವರಿ 21 ) ಎಕ್ಸ್ ಖಾತೆಯಲ್ಲಿ ತಮಿಳುನಾಡು ಸರ್ಕಾರ ಜನವರಿ 22ರಂದು ನಡೆಯಲಿರುವ ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆಯನ್ನು ನಿಷೇಧಿಸಿದೆ ಎಂದು ಆರೋಪಿಸಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ತಮಿಳು ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ಸುದ್ದಿಯೊಂದರ ಫೋಟೊ ಹಂಚಿಕೊಳ್ಳುವ ಮೂಲಕ ನಿರ್ಮಲಾ ಸೀತಾರಾಮನ್ ಈ ರೀತಿ ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿನಲ್ಲಿ 200ಕ್ಕೂ ಅಧಿಕ ರಾಮನ ದೇವಾಲಯಗಳಿವೆ. ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿರ್ವಹಿಸುವ ದೇವಾಲಯಗಳಲ್ಲಿ ಶ್ರೀರಾಮನ ಹೆಸರಿನಲ್ಲಿ ಯಾವುದೇ ಪೂಜೆ, ಭಜನೆ ಅಥವಾ ಅನ್ನದಾನವನ್ನು ಮಾಡಲು ಅನುಮತಿ ನೀಡಿಲ್ಲ. ಖಾಸಗಿ ದೇವಾಲಯಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನೂ ಸಹ ಪೊಲೀಸರು ತಡೆಯುತ್ತಿದ್ದಾರೆ. ಆಯೋಜಕರಿಗೆ ನಿಮ್ಮ ಪಂಗಡಗಳನ್ನು ಕಿತ್ತುಹಾಕುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಇಂತಹ ದ್ವೇಷಪೂರಿತ ಹಿಂದೂ ವಿರೋಧಿ ಕ್ರಮವನ್ನು ಖಂಡಿಸುತ್ತೇನೆ ಎಂದು ನಿರ್ಮಲಾ ಸೀತಾರಾಮನ್ ಬರೆದುಕೊಂಡಿದ್ದಾರೆ.
ಭಜನೆ ಆಯೋಜಿಸಿದ್ದಕ್ಕೆ, ಬಡವರಿಗೆ ಆಹಾರ ನೀಡಿದ್ದಕ್ಕೆ, ಸಿಹಿ ಹಂಚಿ ಸಂಭ್ರಮಿಸುವುದಕ್ಕೆ, ಅಯೋಧ್ಯೆಯಲ್ಲಿ ಮೋದಿ ಅವರನ್ನು ನೋಡುವುದಕ್ಕೂ ಬೆದರಿಕೆ ಹಾಕುತ್ತಿದ್ದಾರೆ. ಕೇಬಲ್ ಟಿವಿ ಆಪರೇಟರ್‌ಗಳು ನೇರಪ್ರಸಾರದ ಸಮಯದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಬಹುದು ಎಂದು ಹೇಳುತ್ತಿದ್ದಾರೆ. ಇದು ʼಇಂಡಿಯಾʼ ಮೈತ್ರಿಕೂಟದ ಡಿಎಂಕೆಯ ಹಿಂದೂ ವಿರೋಧಿ ಪ್ರಯತ್ನ ಎಂದೂ ಸಹ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…