ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ನಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು 32 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ.
ಅಲರ್ಟ್ ಬಂದ ಕೂಡಲೇ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸೌರಭ್ ಪ್ರಸಾದ್, ಇತರ ರೈಲ್ವೆ ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ತೆರಳಿದ್ದಾರೆ ಹಾಗೂ ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆದಿದೆ. ಗಾಯಾಳುಗಳನ್ನು ವಿಶಾಖಪಟ್ಟಣಂ ಹಾಗೂ ವಿಜಿಯನಗರಂ ಜಿಲ್ಲೆಗಳ ಆಸ್ಪತ್ರೆಗಳಿಗೆ ದಾಖಲಾಗಿದೆ. ಘಟನಾ ಸ್ಥಳದಲ್ಲಿ ವಿದ್ಯುತ್ ಕೊರತೆಯ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದೆ.
ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ಸಹಾಯವಾಣಿಯನ್ನು ಆರಂಭಿಸಲಾಗಿದ್ದು 83003; 83004; 83005; 83006, 08912746330, 8106053051, 8106053052, 8500041670, 8500041671 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
ಮಂಡ್ಯ: ವ್ಯಕ್ತಿಯೋರ್ವ ವಿಚಾರಣೆಗೆಂದು ಬಂದು ಎಎಸ್ಐ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ನಾಗಮಂಗಲ ಗ್ರಾಮಾಂತರ…
ರಾಮನಗರ: ರಾಜ್ಯ ಸರ್ಕಾರ 4 ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಿಳ ಮಾಡಿದೆ. ಈ ಹಿನ್ನೆಲೆಯಲ್ಲಿ ದರ ಹೆಚ್ಚಳ…
ಮೈಸೂರು: ಟಿಬೆಟ್ ಧರ್ಮಗುರು ದಲೈಲಾಮ ಅವರಿಂದು ವಿಶ್ರಾಂತಿಗೆಂದು ಬೈಲುಕುಪ್ಪೆಗೆ ಆಗಮಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಿಬೇಟನ್…
ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದರು. ಮೈಸೂರಿನಲ್ಲಿ…
ಬೆಂಗಳೂರು: ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು…
ಹಾವೇರಿ: ಪಕ್ಕದ ರಾಜ್ಯಗಳಾದ ಆಂಧ್ರ ಪ್ರದೇಶ, ತಮಿಳುನಾಡಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ಬಸ್ ಪ್ರಯಾಣ ದರ ತುಂಬಾ ಕಡಿಮೆ ಇದೆ…