ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ನಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು 32 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ.
ಅಲರ್ಟ್ ಬಂದ ಕೂಡಲೇ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸೌರಭ್ ಪ್ರಸಾದ್, ಇತರ ರೈಲ್ವೆ ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ತೆರಳಿದ್ದಾರೆ ಹಾಗೂ ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆದಿದೆ. ಗಾಯಾಳುಗಳನ್ನು ವಿಶಾಖಪಟ್ಟಣಂ ಹಾಗೂ ವಿಜಿಯನಗರಂ ಜಿಲ್ಲೆಗಳ ಆಸ್ಪತ್ರೆಗಳಿಗೆ ದಾಖಲಾಗಿದೆ. ಘಟನಾ ಸ್ಥಳದಲ್ಲಿ ವಿದ್ಯುತ್ ಕೊರತೆಯ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದೆ.
ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ಸಹಾಯವಾಣಿಯನ್ನು ಆರಂಭಿಸಲಾಗಿದ್ದು 83003; 83004; 83005; 83006, 08912746330, 8106053051, 8106053052, 8500041670, 8500041671 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…