ನವದೆಹಲಿ : ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ಮೂರರಲ್ಲಿ ಬಿಜೆಪಿಯ ಐತಿಹಾಸಿಕ ಹಾಗೂ ಅಭೂತಪೂರ್ವ ವಿಜಯವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ ಶ್ಲಾಘಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಂಡಿರುವ ಬಿಜೆಪಿ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಸೋಲಿಸಿ ವಿಜಯ ಸಾಧಿಸಿದೆ.
ಬಿಜೆಪಿ ಸಂಭ್ರಮಾಚರಣೆ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದಿನ ಗೆಲುವು ಐತಿಹಾಸಿಕ ಮತ್ತು ಅಭೂತಪೂರ್ವವಾಗಿದೆ. ಇಂದು ಸಬ್ಕಾ ಸಾಥ್, ಸಬ್ಕಾ ವಿಕಾಸ್ ಭಾವನೆ ಗೆದ್ದಿದೆ. ‘ಅಭಿವೃದ್ಧಿ ಹೊಂದಿದ ಭಾರತ’ ಎಂಬ ಕರೆಗೆ ಜಯ ಸಿಕ್ಕಿದೆ. ಆತ್ಮನಿರ್ಭರ್ ಭಾರತದ ಸಂಕಲ್ಪ ಗೆದ್ದಿದೆ. ತುಳಿತಕ್ಕೊಳಗಾದವರು ಗೆದ್ದಿದ್ದಾರೆ. ಪ್ರಾಮಾಣಿಕತೆ ಮತ್ತು ಉತ್ತಮ ಆಡಳಿತ ಗೆದ್ದಿದೆ ಎಂದು ಪ್ರಧಾನಿ ಘೋಷಿಸಿದರು.
ದೇಶವನ್ನು ದುರ್ಬಲಗೊಳಿಸುವ ರಾಷ್ಟ್ರವಿರೋಧಿ ಅಂಶಗಳನ್ನು ಮತ್ತು ಆಲೋಚನೆಗಳನ್ನು ಬಲಪಡಿಸುವ ರಾಜಕೀಯ ಮಾಡುವುದನ್ನು ನಿಲ್ಲಿಸುವಂತೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಿಗೆ ನನ್ನ ಸಲಹೆಯಾಗಿದೆ ಎಂದು ಅವರು ತಿಳಿಸಿದರು.
ದೇಶದಲ್ಲಿ ಬಿಜೆಪಿಯ ಕೇಂದ್ರ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರದ ವಿರುದ್ಧದ ಅಭಿಯಾನಕ್ಕೆ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ. ಭ್ರಷ್ಟರ ಜೊತೆ ನಿಲ್ಲುವ ಕಿಂಚಿತ್ತೂ ನಾಚಿಕೆಪಡದವರಿಗೆ ದೇಶದ ಜನತೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಸಾರ್ವಜನಿಕ ಬೆಂಬಲ ಎಂಬುದನ್ನು ತನಿಖಾ ಸಂಸ್ಥೆಗಳ ಮಾನಹಾನಿ ಮಾಡಲು ಹಗಲಿರುಳು ಶ್ರಮಿಸುತ್ತಿರುವವರು ಈ ಚುನಾವಣಾ ಫಲಿತಾಂಶವನ್ನು ಅರ್ಥಮಾಡಿಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.
ಫಲಿತಾಂಶದ ಧ್ವನಿ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನಕ್ಕೆ ಸೀಮಿತವಾಗಿಲ್ಲ. ಪ್ರಪಂಚದಾದ್ಯಂತ ಕೇಳಿಬರುತ್ತದೆ. ಭ್ರಷ್ಟಾಚಾರ, ತುಷ್ಟೀಕರಣ ಮತ್ತು ಕುಟುಂಬವಾದದ ವಿರುದ್ಧದ ಅಸಮಾಧಾನವನ್ನು ಇಂದಿನ ಜನಾದೇಶ ಸಾಬೀತುಪಡಿಸಿದೆ. ಈ ಮೂರು ಅನಿಷ್ಟಗಳನ್ನು ತೊಡೆದುಹಾಕಲು ಯಾರಾದರೂ ಪರಿಣಾಮಕಾರಿಯಾಗಿದ್ದರೆ ಅದು ಬಿಜೆಪಿ ಮಾತ್ರ ಎಂದು ದೇಶ ಭಾವಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…