ಶ್ರೀನಗರ: ಕಣಿವೆ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ 15 ನಿಮಿಷಗಳ ಅಂತರದಲ್ಲಿ ಎರಡು ಸ್ಛೋಟಗಳು ಸಂಭವಿಸಿದ್ದು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.
ಸ್ಛೋಟದಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರೆಲ್ಲರೂ ‘ಸ್ಥಿರವಾಗಿದ್ದಾರೆ’ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕಾಂಗ್ರೆಸ್ನ ಭಾರತ್ ಜೋಡೊ ಯಾತ್ರೆ ಮತ್ತು ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಭದ್ರತಾ ಏಜೆನ್ಸಿಗಳು ಹೆಚ್ಚು ಜಾಗರೂಕರಾಗಿರುವ ಸಮಯದಲ್ಲಿ ನರ್ವಾಲ್ನ ಸಾರಿಗೆ ಯಾರ್ಡ್ನಲ್ಲಿ ಶಂಕಿತ ಭಯೋತ್ಪಾದಕರು ಸ್ಛೋಟಗಳನ್ನು ನಡೆಸಿದ್ದಾರೆ.
ಮೊದಲ ಸ್ಛೋಟವು ಬೆಳಿಗ್ಗೆ 10.45ರ ಸುಮಾರಿಗೆ ಸಂಭವಿಸಿದ್ದು, ನಂತರ ಮತ್ತೊಂದು ಸ್ಛೋಟ ಸಂಭವಿಸಿತ್ತು. ಸ್ಛೋಟದ ನಂತರ ಇಡೀ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಿಪೇರಿಗಾಗಿ ವರ್ಕ್ಶಾಪ್ಗೆ ಕಳುಹಿಸಲಾಗಿದ್ದ ವಾಹನದಲ್ಲಿ ಮೊದಲ ಸ್ಛೋಟ ನಡೆಯಿತು ಎಂದು ಪ್ರತ್ಯಕ್ಷದರ್ಶಿ ಜಸ್ವಿಂದರ್ ಸಿಂಗ್ ಹೇಳಿದ್ದಾರೆ. ಹದಿನೈದು ನಿಮಿಷಗಳ ನಂತರ, ಹತ್ತಿರದ ಮತ್ತೊಂದು ಸ್ಥಳದಲ್ಲಿ ಸ್ಛೋಟ ನಡೆದಿತ್ತು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಮೋದಿ ನೇತೃತ್ವದಲ್ಲಿ ಮತ್ತೆ ಅಧಿಕಾರಕ್ಕೆ: ಬಿಎಸ್ವೈ
Next Article ಮಗಳಿಂದ ಪೋಷಕರಿಗೆ ಆಸ್ತಿ ಹಿಂದಿರುಗಿಸಿದ ಉಪವಿಭಾಗಧಿಕಾರಿ