ಭೂಪಾಲ್: ಛತ್ತೀಸ್‌ಗಡದಲ್ಲಿ ಬಿಜೆಪಿಯ ನೂತನ ಬುಡಕಟ್ಟು ಮುಖ್ಯಮಂತ್ರಿ ವಿಷ್ಣು ದಿಯೋ ಸಾಯಿ ಅವರ ಸಂಪುಟ ಇಬ್ಬರು ಡಿಸಿಎಂಗಳನ್ನು ಹೊಂದಲಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಜಾತಿ ಸಮೀಕರಣವನ್ನು ಸಮತೋಲನಗೊಳಿಸುವ ಬಿಜೆಪಿ ಪಕ್ಷ ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.
ರಾಜ್ಯ ಬಿಜೆಪಿ ಮುಖ್ಯಸ್ಥ ಹಿಂದುಳಿದ ವರ್ಗಗಳ ನಾಯಕ ಅರುಣ್ ಸಾವೊ, ಮತ್ತು ಬ್ರಾಹ್ಮಣರಾಗಿರುವ ವಿಜಯ್ ಶರ್ಮಾ ಡಿಸಿಎಂ ಆಗಲಿದ್ದಾರೆ ಎನ್ನಲಾಗುತ್ತಿದೆ. ಈ ಬಾರಿಯ ಸಿಎಂ ಹುದ್ದೆಗೆ ಆಕಾಂಕ್ಷಿಯಾಗಿದ್ದ ರಜಪೂತ ಸಮುದಾಯಕ್ಕೆ ಸೇರಿದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರನ್ನು ವಿಧಾನಸಭೆ ಸ್ಪೀಕರ್ ಆಗಿ ಆಯ್ಕೆ ಮಾಡುವ ಬಗ್ಗೆ ಬಿಜೆಪಿಯಲ್ಲಿ ಯೋಜನೆ ನಡೆಸಿದೆ ಎನ್ನಲಾಗಿದೆ.
ರಮಣ್ ಸಿಂಗ್ ಜೊತೆಗೆ, ಅರುಣ್ ಸಾವೊ ಕೂಡ ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿದ್ದರು. ಬಿಜೆಪಿ ಪಕ್ಷದ ಅಧಿಕಾರ ಹಂಚುವ ಹೊಸ ಸಮೀಕರಣ ಗುಂಪುಗಾರಿಕೆಯನ್ನು ದೂರವಿರಿಸಲು ಸಹಾಯ ಮಾಡುತ್ತದೆ ಎಂಬ ಯೋಜನೆಯಿಂದ ಈ ತೀರ್ಮಾನಕ್ಕೆ ಬರಲಾಗಿದೆ.
ಗದಗ : ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…