ನವದೆಹಲಿ : ತಮ್ಮ ವಿರುದ್ಧ ಹೇರಲಾಗಿರುವ ಅಕ್ರಮ ಚಟುವಟಿಕೆಗಳ ನಿಯಂತ್ರಣ ಕಾಯಿದೆಯ ನಿಬಂಧನೆಗಳನ್ನು ಪ್ರಶ್ನಿಸಿ ಹೋರಾಟಗಾರ ಉಮರ್ ಖಾಲಿದ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜಧಾನಿಯಲ್ಲಿ 2020 ರಲ್ಲಿ ನಡೆದ ಗಲಭೆಗಳಿಗೆ ಸಂಬಂಧಿಸಿದಂತೆ ಖಾಲಿದ್ ಅವರು ಯುಎಪಿಎ ಅಡಿ ಸೆಪ್ಟೆಂಬರ್ 2020ರಿಂದ ಬಂಧನದಲ್ಲಿದ್ದಾರೆ.
ಶುಕ್ರವಾರ ಸುಪ್ರೀಂ ಕೋರ್ಟಿನ ವಿಭಾಗೀಯ ಪೀಠವೊಂದು ಖಾಲಿದ್ ಅವರ ಅರ್ಜಿಯನ್ನು ಯುಎಪಿಎ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಇತರ ಅರ್ಜಿಗಳೊಂದಿಗೆ ಸೇರಿಸಿದೆ.
ತಾನು ದೆಹಲಿ ಹಿಂಸಾಚಾರದಲ್ಲಿ ಯಾವುದೇ ಪಾತ್ರ ಹೊಂದಿಲ್ಲ ಹಾಗೂ ಯಾವುದೇ ಸಂಚನ್ನು ಇತರ ಆರೋಪಿಗಳೊಂದಿಗೆ ಹೂಡಿಲ್ಲ ಎಂದು ಹೇಳಿ ಖಾಲಿದ್ ಅವರು ಜಾಮೀನನ್ನೂ ಕೋರಿದ್ದಾರೆ.
ಜೆಎನ್‌ಯುವಿನ ಮಾಜಿ ವಿದ್ಯಾರ್ಥಿಯಾಗಿರುವ ಉಮರ್ ಖಾಲಿದ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ ನಂತರ ಅವರು ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ.
ಖಾಲಿದ್ ಅವರ ಪ್ರಕರಣ ಸುಪ್ರೀಂ ಕೋರ್ಟ್ ಮುಂದೆ ಮೇ18ರಂದು ಮೊದಲು ಬಂದಿತ್ತು. ಅಂದಿನಿಂದ ವಿವಿಧ ಕಾರಣಗಳಿಗಾಗಿ ಆರು ಬಾರಿ ಮುಂದೂಡಲ್ಪಟ್ಟಿದೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…