ರಾಷ್ಟ್ರೀಯ

Union Budget 2024: ಬಜೆಟ್‌ ಮಂಡನೆಯಲ್ಲಿ ಮೊರಾರ್ಜಿ ದೇಸಾಯಿ ದಾಖಲೆ ಸರಿಗಟ್ಟಿದ ನಿರ್ಮಲಾ ಸೀತಾರಾಮನ್‌

ಇಂದು ( ಫೆಬ್ರವರಿ 1 ) ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ ಮಂಡನೆ ನಡೆಯುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್ ಮಂಡಿಸುತ್ತಿದ್ದು ನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಮೊರಾರ್ಜಿ ದೇಸಾಯಿ ಬಳಿಕ ಸತತ ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆಯನ್ನು ನಿರ್ಮಲಾ ಸೀತಾರಾಮನ್‌ ಮಾಡಿದ್ದಾರೆ. 2019ರಿಂದ 2023ರವರೆಗೆ ಸತತವಾಗಿ ಐದು ಬಾರಿ ವಾರ್ಷಿಕ ಬಜೆಟ್‌ ಮಂಡನೆ ಮಾಡಿದ್ದ ನಿರ್ಮಲಾ ಸೀತಾರಾಮನ್‌ ಇಂದು ನಡೆಯುತ್ತಿರುವ ಮಧ್ಯಂತರ ಬಜೆಟ್‌ ಸೇರಿ ಸತತ ಆರನೇ ಬಾರಿಗೆ ಬಜೆಟ್‌ ಮಂಡಿಸಿದ್ದಾರೆ.

ಈ ಹಿಂದೆ ಹಣಕಾಸು ಸಚಿವರಾಗಿದ್ದ ಮೊರಾರ್ಜಿ ದೇಸಾಯಿ 1959ರಿಂದ 1964ರವರೆಗೆ ಐದು ವಾರ್ಷಿಕ ಬಜೆಟ್‌ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿ ಸತತವಾಗಿ ಅತಿಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಫೈನಾನ್ಸ್‌ ಮಿನಿಸ್ಟರ್‌ ಎಂಬ ದಾಖಲೆ ಬರೆದಿದ್ದರು. ಈ ದಾಖಲೆಯನ್ನು ಸರಿದೂಗಿಸಿರುವ ನಿರ್ಮಲಾ ಸೀತಾರಾಮನ್‌ ಐದು ಬಾರಿ ಬಜೆಟ್‌ ಮಂಡಿಸಿದ್ದ ಮನಮೋಹನ್‌ ಸಿಂಗ್‌, ಅರುಣ್‌ ಜೇಟ್ಲಿ, ಪಿ ಚಿದಂಬರಂ ಹಾಗೂ ಯಶವಂತ್‌ ಸಿನ್ಹಾ ಅವರನ್ನು ಹಿಂದಿಕ್ಕಿದ್ದಾರೆ.

andolana

Recent Posts

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

10 mins ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

23 mins ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

50 mins ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

1 hour ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

2 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

3 hours ago