Mysore
22
overcast clouds

Social Media

ಬುಧವಾರ, 24 ಜೂನ್ 2026
Light
Dark

Union Budget-2024: ಒಂದು ಕೋಟಿ ಮನೆಗಳಿಗೆ ಸೋಲಾರ್ ಮೇಲ್ಛಾವಣಿ

ನವದೆಹಲಿ: ಅಯೋಧ್ಯೆಯಲ್ಲಿನ ರಾಮಮಂದಿರ ಉದ್ಘಾಟನೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಸೂರ್ಯೋದಯ ಯೋಜನೆಯಡಿ ಒಂದು ಕೋಟಿ ಮನೆಗಳಿಗೆ ಸೋಲಾರ್‌ ಮೇಲ್ಚಾವಣಿ ಯೋಜನೆ ಘೋಷಿಸಿದ್ದರು.

ಇಂದು ಲೋಕಸಭೆಯಲ್ಲಿ ಮಧ್ಯಂತರ ಬಜೆಟ್‌ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇತ್ತೀಚೆಗೆ ಘೋಷಣೆಯಾದ `ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ’ಗೆ ವಿಶೇಷ ಒತ್ತು ನೀಡಲಾಗಿದೆ. ಈ ಯೋಜನೆ ಬಗ್ಗೆ ಅವರು ತಮ್ಮ ಬಜೆಟ್ ಭಾಷಣದಲ್ಲಿ ವಿಶೇಷವಾದ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಯೋಜನೆಯ ಮೂಲಕ ಒಂದು ಕೋಟಿ ಮನೆಗಳಲ್ಲಿ ಸೌರ ಮೇಲ್ಛಾವಣಿ ಅಳವಡಿಸಲು ಉದ್ದೇಶಿಸಲಾಗಿದೆ. ಇದರಿಂದ ಒಂದು ಮನೆಗೆ ತಿಂಗಳಿಗೆ ಸುಮಾರು 300 ಯೂನಿಟ್ ವಿದ್ಯುತ್ ಉಳಿತಾಯವಾಗುತ್ತದೆ. ವಾರ್ಷಿಕವಾಗಿ 15,000-18,000 ರೂ.ಗಳ ಉಳಿತಾಯವಾಗಲಿದೆ ಎಂದು ಅವರು ಹೇಳಿದ್ದಾರೆ.

ಸರ್ಕಾರಿ ಸ್ವಾಮ್ಯದ ಆರ್‌ಇಸಿ ಲಿಮಿಟೆಡ್‍ನ್ನು ಯೋಜನೆಯ ಅನುಷ್ಠಾನ ಏಜೆನ್ಸಿಯಾಗಿ ನೇಮಿಸಲಾಗಿದೆ. ಒಂದು ವರ್ಷದೊಳಗೆ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿ ಸೌರ ಅಳವಡಿಕೆಗಳನ್ನು ಹೊಂದುವ ಗುರಿಯನ್ನು ಹೊಂದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!