The Union Minister for Finance and Corporate Affairs, Smt. Nirmala Sitharaman meeting with the Managing Director of IMF News, Ms. Kristalina Georgieva, in New Delhi on September 07, 2022.
ನವದೆಹಲಿ: ಅಯೋಧ್ಯೆಯಲ್ಲಿನ ರಾಮಮಂದಿರ ಉದ್ಘಾಟನೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಸೂರ್ಯೋದಯ ಯೋಜನೆಯಡಿ ಒಂದು ಕೋಟಿ ಮನೆಗಳಿಗೆ ಸೋಲಾರ್ ಮೇಲ್ಚಾವಣಿ ಯೋಜನೆ ಘೋಷಿಸಿದ್ದರು.
ಇಂದು ಲೋಕಸಭೆಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇತ್ತೀಚೆಗೆ ಘೋಷಣೆಯಾದ `ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ’ಗೆ ವಿಶೇಷ ಒತ್ತು ನೀಡಲಾಗಿದೆ. ಈ ಯೋಜನೆ ಬಗ್ಗೆ ಅವರು ತಮ್ಮ ಬಜೆಟ್ ಭಾಷಣದಲ್ಲಿ ವಿಶೇಷವಾದ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಯೋಜನೆಯ ಮೂಲಕ ಒಂದು ಕೋಟಿ ಮನೆಗಳಲ್ಲಿ ಸೌರ ಮೇಲ್ಛಾವಣಿ ಅಳವಡಿಸಲು ಉದ್ದೇಶಿಸಲಾಗಿದೆ. ಇದರಿಂದ ಒಂದು ಮನೆಗೆ ತಿಂಗಳಿಗೆ ಸುಮಾರು 300 ಯೂನಿಟ್ ವಿದ್ಯುತ್ ಉಳಿತಾಯವಾಗುತ್ತದೆ. ವಾರ್ಷಿಕವಾಗಿ 15,000-18,000 ರೂ.ಗಳ ಉಳಿತಾಯವಾಗಲಿದೆ ಎಂದು ಅವರು ಹೇಳಿದ್ದಾರೆ.
ಸರ್ಕಾರಿ ಸ್ವಾಮ್ಯದ ಆರ್‌ಇಸಿ ಲಿಮಿಟೆಡ್‍ನ್ನು ಯೋಜನೆಯ ಅನುಷ್ಠಾನ ಏಜೆನ್ಸಿಯಾಗಿ ನೇಮಿಸಲಾಗಿದೆ. ಒಂದು ವರ್ಷದೊಳಗೆ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿ ಸೌರ ಅಳವಡಿಕೆಗಳನ್ನು ಹೊಂದುವ ಗುರಿಯನ್ನು ಹೊಂದಿದೆ.
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…