ಫಿರೋಜಾಬಾದ್(ಉತ್ತರ ಪ್ರದೇಶ): ಎಲೆಕ್ಟ್ರಾನಿಕ್ಸ್ ಮತ್ತು ಪೀಠೋಪಕರಣಗಳ ಮಳಿಗೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂರು ಮಕ್ಕಳು ಸೇರಿ ಒಂದೇ ಕುಟುಂಬದ ೬ ಮಂದಿ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ನಡೆದಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ಮಳಿಗೆ ಮಾತ್ರವಲ್ಲದೆ, ಬೆಂಕಿ ಮೊದಲ ಮಹಡಿಯ ಮಾಲೀಕರ ಮನೆಗೂ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಲಾ 2 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಿದ್ದಾರೆ.