ನವದೆಹಲಿ : ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿದ್ದು, ಹೀಗಾಗಿ ದೇಶದಲ್ಲಿ ಇಂದು ಉಪರಾಷ್ಟ್ರಪತಿ ಚುನಾವಣೆ ಸಂಬಂಧ ಮತದಾನ ನಡೆಯುತ್ತಿದ್ದು, ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್ ಸಂಸದ ಡಾ.ಮನಮೋಹನ್ ಸಿಂಗ್ ಸಂಸತ್ತಿಗೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶವೂ ಈ ದಿನವೇ ಅಂದರೆ ಆಗಸ್ಟ್ 6ರಂದೇ ಹೊರಬೀಳಲಿದೆ. ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಉಪರಾಷ್ಟ್ರಪತಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
2022ರಲ್ಲಿ ದೇಶದ 16ನೇ ಉಪ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಸಲಾಗುತ್ತದೆ. ಈ ವೇಳೆ ಸಂಸತ್ ಉಭಯ ಸದನಗಳ ಸದಸ್ಯರು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೆ.
ರಾಜ್ಯಸಭೆಯ 233 ಚುನಾಯಿತ ಸದಸ್ಯರು, ರಾಜ್ಯಸಭೆಯ 12 ನಾಮ ನಿರ್ದೇಶಿತ ಸದಸ್ಯರು ಹಾಗೂ ಲೋಕಸಭೆಯ 543 ಸದಸ್ಯರು ಈ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಒಟ್ಟು ಮೂರನೇ ಎರಡರಷ್ಟು ಮತಗಳನ್ನು ಪಡೆದುಕೊಳ್ಳುವ ಅಭ್ಯರ್ಥಿಯು ಮುಂದಿನ ಉಪ ರಾಷ್ಟ್ರಪತಿ ಆಗಿ ಆಯ್ಕೆ ಆಗಲಿದ್ದಾರೆ.