ನವದೆಹಲಿ : ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿದ್ದು, ಹೀಗಾಗಿ ದೇಶದಲ್ಲಿ ಇಂದು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ ಇಂದು ಸಂಜೆ 5 ಗಂಟೆಗೆ ಮುಕ್ತಾಯಗೊಂಡಿದೆ.
ಈ ದಿನವೇ ಫಲಿತಾಂಶ ಹೊರಬೀಳುವುದರಿಂದ ಮತದಾನದ ಎಣಿಕೆ ಕಾರ್ಯ ಆರಂಭಗೊಂಡಿದೆ. 2022ರಲ್ಲಿ ದೇಶದ 16ನೇ ಉಪ ರಾಷ್ಟ್ರಪತಿ ಆಯ್ಕೆಗೆ ನಡೆದ ಈ ಚುನಾವಣೆಯಲ್ಲಿ ಸಂಸತ್ ಉಭಯ ಸದನಗಳ ಸದಸ್ಯರು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಪ್ರಕ್ರತಿಯೆಯಲ್ಲಿ ಭಾಗಿಯಾಗಿದ್ದು,
ನಾಮನಿರ್ದೇಶನಗೊಂಡು ಕಣದಲ್ಲಿದ್ದ ಅಭ್ಯರ್ಥಿಗಳು ಒಟ್ಟು ಮೂರನೇ ಎರಡರಷ್ಟು ಮತಗಳನ್ನು ಪಡೆದುಕೊಂಡು ಮುಂದಿನ ಉಪ ರಾಷ್ಟ್ರಪತಿ ಆಗಿ ಆಯ್ಕೆ ಆಗಲಿದ್ದಾರೆ.
ಕಣದಲ್ಲಿರುವ ಪ್ರಮುಖರು
ಮಾರ್ಗರೇಟ್ ಆಳ್ವಾ : ಹಿರಿಯ ಕಾಂಗ್ರೆಸ್ ನಾಯಕಿ, ಈ ಹಿಂದೆ ರಾಜಸ್ಥಾನ, ಉತ್ತರಾಖಂಡ, ಗೋವಾ ಮತ್ತು ಗುಜರಾತ್ ಗಳಲ್ಲಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿರುವ ಆಳ್ಬಾ ಅವರು ಇದೀಗ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಗೆಲುವು ಕಾಣುವ ನಿರೀಕ್ಷೆಯಲ್ಲಿದ್ದಾರೆ.
ಮಾರ್ಗರೇಟ್ ಆಳ್ವಾ ಅವರು ಪರಿಚಯ :
ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಮಾರ್ಗರೇಟ್ ಆಳ್ವಾ ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಬಿಎ ಪದವಿ ಪಡೆದರು ಮತ್ತು ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದರು. ವಕೀಲೆಯಾಗಿ ರಾಜಕಾರಣದಲ್ಲಿ ತಮ್ಮನ್ನು ತೊಡಗಿಸಿಕೊಂಡರು. 80 ರ ಹರೆಯದ ಮಾರ್ಗರೇಟ್ ಆಳ್ವಾ ಅವರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ, ಗೋವಾ, ಗುಜರಾತ್,ರಾಜಸ್ಥಾನ ಮತ್ತು ಉತ್ತರಾಖಂಡದ ರಾಜ್ಯಪಾಲೆಯಾಗಿ ಆಗಿ ಆಗಸ್ಟ್ 2014 ರಲ್ಲಿ ತನ್ನ ಅಧಿಕಾರಾವಧಿಯ ಅಂತ್ಯದವರೆಗೆ ಸೇವೆ ಸಲ್ಲಿಸಿದ ಹಿರಿಯ ಕಾಂಗ್ರೆಸ್ ನಾಯಕಿ.ರಾಜ್ಯ ಸಭೆ, ಲೋಕ ಸಭಾ ಸದಸ್ಯೆಯಾಗಿ, ಕೇಂದ್ರ ಸಚಿವೆಯಾಗಿ ಕೆಲಸ ಮಾಡಿದ ಸುದೀರ್ಘ ರಾಜಕೀಯ ಮತ್ತು ಆಡಳಿತ ಅನುಭವ ಹೊಂದಿದ್ದಾರೆ.
ಜಗದೀಪ್ ಧನಕರ್
ಪಶ್ಚಿಮ ಬಂಗಾಳ ರಾಜ್ಯಪಾಲರಾಗಿದ್ದ ಜಗದೀಪ್ ಧನಕರ್, ದೀದಿ ಜೊತೆ ಸಂಘರ್ಷದಲ್ಲೇ ತೊಡಗಿದವರು.ಸಂಸತ್ತಿನ ಈಗಿನ 780 ಸಂಖ್ಯಾಬಲದ ಪೈಕಿ ಬಿಜೆಪಿ ಏಕಾಂಗಿಯಾಗಿ 394 ಸಂಸದರನ್ನು ಹೊಂದಿದೆ. ಅದು ಬಹುಮತದ 390 ಸ್ಥಾನಕ್ಕಿಂತ ಹೆಚ್ಚಾಗಿದೆ. ಹೀಗಾಗಿ ಜಗದೀಪ್ ಧನಕರ್ ಗೆಲುವಿನ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.