ರಾಷ್ಟ್ರೀಯ

ಡಿ.13ರಂದು ವಿಷ್ಣು ದೇವ್ ಸಾಯಿ ಛತ್ತೀಸ್‌ಗಢ ಸಿಎಂ ಆಗಿ ಪ್ರಮಾಣವಚನ

ನವದೆಹಲಿ : ಡಿಸೆಂಬರ್ 13 ರಂದು ಮಧ್ಯಾಹ್ನ 3.30ಕ್ಕೆ ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನೂತನ ಮುಕ್ಯಮಂತ್ರಿಯಾಗಿ ಆಯ್ಕೆಯಾಗಿರುವ ವಿಷ್ಣು ದೇವ್‌ ಸಾಯಿ ಅವರು ಪ್ರಭಾವಿ ಸಾಹು ಸಮುದಾಯಕ್ಕೆ ಸೇರಿದವರಾಗಿದ್ದು, ಇದು ದುರ್ಗ್, ರಾಯ್ಪುರ ಮತ್ತು ಬಿಲಾಸ್ಪುರ ವಿಭಾಗಗಳಲ್ಲಿ ಕಂಡುಬರುವ ಸಮುದಾಶಯವಾಗಿದೆ.

ಇನ್ನು ಛತ್ತೀಸ್ಗಢದ ಭಾರತೀಯ ಜನತಾ ಪಕ್ಷ ಸರ್ಕಾರವು ಉಪಮುಖ್ಯಮಂತ್ರಿಯನ್ನ ನೇಮಿಸಬಹುದು ಎಂದು ಹಿರಿಯ ಮುಖಂಡ ರಮಣ್ ಸಿಂಗ್ ಹೇಳಿದ್ದಾರೆ.

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 90 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 54 ಸ್ಥಾನಗಳನ್ನು ಗೆದ್ದು, ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಗೊಳಿಸಿತು. 2018 ರಲ್ಲಿ 68 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 35 ಸ್ಥಾನಗಳಿಗೆ ಕುಸಿದಿದೆ.

ಪಕ್ಷದ ರಾಜ್ಯ ಪ್ರಧಾನ ಕಚೇರಿಯಾದ ಕುಶಾಭೌ ಠಾಕ್ರೆ ಪರಿಷರ್ನಲ್ಲಿ ಹೊಸದಾಗಿ ಆಯ್ಕೆಯಾದ 54 ಶಾಸಕರ ಸಭೆಯಲ್ಲಿ ಸಾಯಿ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಭಾನುವಾರ ಆಯ್ಕೆ ಮಾಡಲಾಯಿತು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

11 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago