Mysore
22
overcast clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ರಾಮಮಂದಿರ ಉದ್ಘಾಟನೆಗೆ ಎಲ್‌ಕೆ ಅಡ್ವಾಣಿ, ಮುರಳಿ ಮನೋಹರ ಜೋಶಿಗೆ ಆಹ್ವಾನ

ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ಬಿಜೆಪಿ ಹಿರಿಯರಾದ ಎಲ್‌ಕೆ ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ಅವರಿಗೆ ಆಹ್ವಾನ ವಿಶ್ವ ಹಿಂದೂ ಪರಿಷತ್‌ ಆಹ್ವಾನ ನೀಡಿದೆ.

ಈ ಹಿಂದೆ ಹಲವಾರು ಸ್ವಾಮೀಜಿ ಹಾಗೂ ರಾಜಕಾರಣಿಗಳಿಗೆ ಆಹ್ವಾನ ನೀಡಿದ್ದ ಟ್ರಸ್ಟ್‌ ವಯಸ್ಸಿನ ಕಾರಣ ಹೇಳಿ ಅಯೋಧ್ಯೆ ರಾಮಮಂದಿರ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದ ಎಲ್‌ಕೆ ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ಅವರ ಹೆಸರನ್ನೇ ಕೈಬಿಟ್ಟಿತ್ತು.

ಈ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾದ ಬೆನ್ನಲ್ಲೇ ಇದೀಗ ಇಬ್ಬರೂ ನಾಯಕರಿಗೆ ಆಹ್ವಾನ ನೀಡಲಾಗಿದೆ. “ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಭಾಗವಹಿಸಲು ಲಾಲ್ ಕೃಷ್ಣ ಅಡ್ವಾಣಿ ಮತ್ತು ರಾಮಮಂದಿರ ಚಳವಳಿಯ ಹರಿಕಾರ ಡಾ. ಮುರಳಿ ಮನೋಹರ ಜೋಶಿ ಅವರನ್ನು ಆಹ್ವಾನಿಸಲಾಗಿದೆ. ಇಬ್ಬರೂ ಹಿರಿಯರು ಭಾಗವಹಿಸುವುದಾಗಿ ಭರವಸೆ ನೀಡಿದ್ದಾರೆ” ಎಂದು ವಿಶ್ವ ಹಿಂದೂ ಪರಿಷತ್‌ನ ಸದಸ್ಯ ಅಲೋಕ್‌ ಕುಮಾರ್‌ ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ