ನವದೆಹಲಿ : ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ತ್ಯಾಗ ಬಲಿದಾನ ಮಾಡಿದ್ದಾರೆ. ಆದಾಗ್ಯೂ, ಲೋಕಸಭೆ ಸಂಸದ ಡಿ.ಕೆ.ಸುರೇಶ್ ಹಾಗೆ ಹೇಳಿಲ್ಲ ಎಂದು ಹೇಳಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅದನ್ನು ಚರ್ಚಿಸಬಾರದು ಎಂದು ಹೇಳಿದರು.
ಇಂದು ರಾಜ್ಯಸಭೆ ಕಲಾಪದ ವೇಳೆ ಈ ವಿಚಾರವಾಗಿ ಪ್ರಸ್ತಾಪಿಸಿದ ಅವರು, ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ. ಯಾವುದೇ ಪಕ್ಷದವರಾಗಿರಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ‘ಪ್ರತ್ಯೇಕ ದೇಶ’ ಹೇಳಿಕೆಯನ್ನು ಪಿಯೂಷ್ ಗೋಯಲ್ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಈ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ಖರ್ಗೆ, ದೇಶ ವಿಭಜಿಸುವ ಮಾತುಗಳನ್ನು ಯಾರೇ ಆಡಿದರೂ ಸಹಿಸಲ್ಲ ಎಂದರು.
ಕೇಂದ್ರದ ಮಧ್ಯಂತರ ಬಜೆಟ್ ಟೀಕಿಸುವ ಭರದಲ್ಲಿ ಡಿಕೆ ಸುರೇಶ್ ಗುರುವಾರ ನೀಡಿದ್ದ ಪ್ರತ್ಯೇಕ ರಾಷ್ಟ್ರ ಹೇಳಿಕೆ ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕರ್ನಾಟಕದಲ್ಲಿ ಬಿಜೆಪಿ ನಾಯಕರು ಡಿಕೆ ಸುರೇಶ್ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಡಿ.ಕೆ ಸುರೇಶ್ ಅವರ ದೇಶ ವಿಭಜನೆ ಹೇಳಿಕೆ ಸಂವಿಧಾನಕ್ಕೆ ಮಾಡಿದ ಅಪಮಾನ ಮಾಡಿದ್ದಾರೆ. ಅನುದಾನ ಸರಿಯಾಗಿ ನೀಡುತ್ತಿಲ್ಲ ಎಂದು ಸುಳ್ಳು ಆರೋಪ ಮಾಡಿ ದೇಶ ವಿಭಜನೆ ಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಅಲ್ಲದೇ ಇದರ ತಿನಿಖೆಯನ್ನು ನೈತಿಕ ಸಮಿತಿಗೆ ವಹಿಸಬೇಕು ಎಂದು ಪ್ರಲ್ಹಾದ್ ಜೋಷಿ ಆಗ್ರಹಿಸಿದ್ದಾರೆ.
ದೇಶದ ಏಕತೆ ಮತ್ತು ಸಾರ್ವಭೌಮತ್ವದ ಬಗ್ಗೆ ಯಾರೂ ಮಾತನಾಡಬಾರದು ಸಂಸದ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…