Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಜನತಾ ತೀರ್ಪನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇವೆ: ರಾಹುಲ್ ಗಾಂಧಿ

ನವದೆಹಲಿ : ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್​ಗಡದಲ್ಲಿ ಕಾಂಗ್ರೆಸ್ ಸೋಲನುಭವಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಜನತಾ ತೀರ್ಪನ್ನು ವಿನಮ್ರತೆಯಿಂದ ಸ್ವೀಕರಿಸುವುದಾಗಿ ಹೇಳಿದ್ದಾರೆ. ಮತ್ತು ಪಕ್ಷದ ತಾತ್ವಿಕ ಹೋರಾಟ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಪಕ್ಷ ತೆಲಂಗಾಣದಲ್ಲಿ ಜಯಭೇರಿ ಭಾರಿಸಿದೆ. ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಲ ಕಿಲಕಿಲ ಎಂದಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಚುನಾವಣೆ ಹೆಚ್ಚಿನ ಮಹತ್ವ ಪಡೆದುಕೊಂಡಿತ್ತು.

‘ಮಧ್ಯಪ್ರದೇಶ, ಛತ್ತೀಸ್​ಗಡ್ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಜನಾದೇಶವನ್ನು ನಾವು ಸ್ವೀಕರಿಸುತ್ತೇವೆ. ಆದರೆ, ವೈಚಾರಿಕ ಸಮರ ಮುಂದುವರಿಯುತ್ತದೆ,’ ಇನ್ನು, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವನ್ನು ಸ್ವಾಗತಿಸಿರುವ ಅವರು ಅಲ್ಲಿನ ಜನತೆಗೆ ಧನ್ಯವಾದ. ‘ಪ್ರಜಾಲು ತೆಲಂಗಾಣ ನಿರ್ಮಿಸುವ ನಮ್ಮ ಭರವಸೆಯನ್ನು ಖಂಡಿತವಾಗಿ ಈಡೇರಿಸುತ್ತೇವೆ,’ ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ತೆಲಂಗಾಣದ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ರೇವಂತ್ ರೆಡ್ಡಿ ಸಿಎಂ ರೇಸ್​ನಲ್ಲಿದ್ದಾರೆ. ಆದರೆ, ಕಾಮರೆಡ್ಡಿ ಕ್ಷೇತ್ರದಲ್ಲಿ ರೇವಂತ್ ರೆಡ್ಡಿ ಸೋಲನಭವಿಸಿರುವುದು ಗಮನಾರ್ಹ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ