ರಾಷ್ಟ್ರೀಯ

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳುವುದಿಲ್ಲ: ಮಿಜೋರಾಂ ಸಿಎಂ

ನವದೆಹಲಿ : ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪ್ರಚಾರಾಭಿಯಾನದ ವೇಳೆ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಮಿಜೋರಾಂ ಮುಖ್ಯಮಂತ್ರಿ ಝೊರಮ್ತುಂಗ ಅವರು ಹೇಳಿದ್ದಾರೆಂದು ಬಿಬಿಸಿ ವರದಿ ಮಾಡಿದೆ. ರಾಜ್ಯದಲ್ಲಿ ಚುನಾವಣೆ ನವೆಂಬರ್‌ 7ರಂದು ನಡೆಯಲಿದೆ.

ಪ್ರಧಾನಿ ಮೋದಿ ಮಮಿತ್‌ ಪಟ್ಟಣಕ್ಕೆ ಅಕ್ಟೋಬರ್‌ 30ರಂದು ಭೇಟಿ ನೀಡುವ ಕಾರ್ಯಕ್ರಮವಿದ್ದು ಆ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮತ್ತಿತರ ಪ್ರಮುಖ ಪಕ್ಷದ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ಬಿಜೆಪಿ ನೇತೃತ್ವದ ನಾರ್ತ್‌ ಈಸ್ಟ್‌ ಡೆಮಾಕ್ರೆಟಿಕ್‌ ಅಲಾಯನ್ಸ್‌ ಭಾಗವಾಗಿದ್ದರೂ ತಮ್ಮ ಪಕ್ಷ ಮಿಜೋ ನ್ಯಾಷನಲ್‌ ಫ್ರಂಟ್‌ ಈ ಹಂತದಲ್ಲಿ ಬಿಜೆಪಿಗೆ ಅನುಕಂಪ ತೋರಿಸುವ ಅಗತ್ಯವಿಲ್ಲ ಎಂದು ಮಣಿಪುರದ ಸಂಘರ್ಷಮಯ ಸ್ಥಿತಿಯನ್ನು ಉಲ್ಲೇಖಿಸಿ ಅವರು ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಾ ಹೇಳಿದರು.

“ಮಿಜೋರಾಂನ ಜನರೆಲ್ಲರೂ ಕ್ರೈಸ್ತರು. ಮಣಿಪುರದಲ್ಲಿ ನೂರಾರು ಚರ್ಚುಗಳಿಗೆ ಮೈತೈಗಳು ಬೆಂಕಿ ಹಚ್ಚಿದಾಗ, ಅವರು (ಮಿಜೋರಾಂ ಜನರು) ಅದಕ್ಕೆ ಸಂಪೂರ್ಣ ವಿರುದ್ಧವಾಗಿದ್ದರು,” ಎಂದು ಅವರು ಹೇಳಿದರು.

“ಪ್ರಧಾನಿ ಅವರೊಬ್ಬರೇ ವೇದಿಕೆ ಹಂಚಿಕೊಂಡರೆ ಮತ್ತು ನಾನು ಪ್ರತ್ಯೇಕವಾಗಿ ಬೇರೆ ವೇದಿಕೆ ಹಂಚಿಕೊಂಡರೆ ಒಳ್ಳೆಯದು,” ಎಂದು ಮುಖ್ಯಮಂತ್ರಿ ಹೇಳಿದರು.

ನಮ್ಮ ಪಕ್ಷವು ಕಾಂಗ್ರೆಸ್‌ ಅನ್ನು ವಿರೋಧಿಸುವ ಕಾರಣ ಅದು ಕೇಂದ್ರದಲ್ಲಿ ಎನ್‌ಡಿಎ ಭಾಗವಾಗಿದೆ ಎಂದು ಅವರು ಹೇಳಿದರು.

andolanait

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

11 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

12 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

12 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

12 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

13 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

16 hours ago