ಅಯೋಧ್ಯೆ: ಇಂದು ಅಯೋಧ್ಯೆ ಭವ್ಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನೆರವೇರಿದೆ. ಈ ಕಾರ್ಯಕ್ರದ ಯಶಸ್ಸಿನಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಳ್ಳಿಯ ರಾಮಮಂದಿರ ಪ್ರತಿರೂಪವನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಉಡುಗೊರೆಯಾಗಿ ನೀಡಿ ಗೌರವಿಸಿದರು. ಗೋವಿಂದ್ ದೇವ್ ಗುರೂಜಿ ಮಹಾರಾಜ್ ಅವರು ಪ್ರಧಾನಿಗೆ ಶಾಲು ಹೊದಿಸಿ ಗೌರವಿಸಿದರು.
ಜೊತೆಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೂ ಸಿಎಂ ಯೋಗಿ ಬೆಳ್ಳಿಯ ರಾಮಮಂದಿರ ಉಡುಗೊರೆ ನೀಡಿದರು.
ಪ್ರಾಣಪ್ರತಿಷ್ಠೆ ಸಂಪನ್ನ: ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್ ಮುಹೂರ್ತದಲ್ಲಿ ಶಾಸ್ತ್ರೋಕ್ತವಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು.
ಅರ್ಚಕರು, ಪಂಡಿತರು ಹಾಗೂ ಯಜಮಾನನಾಗಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣಪ್ರತಿಷ್ಠಾಪನೆ ನೆರವೇರಿತು.
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಿಎಂ ಯೋಗಿ ಆದಿತ್ಯನಾಥ್, ಗುಜರಾತ್ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮೊದಲಾದವರು ಉಪಸ್ಥಿತರಿದ್ದರು
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…