ಕಾರು ಪಲ್ಟಿ: ಬಾಲಕ ಸ್ಥಳದಲ್ಲೇ ಸಾವು

ಮದ್ದೂರು: ತಾಲ್ಲೂಕಿನ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಬೆಕ್ಕಳಲೆ ಗ್ರಾಮದಲ್ಲಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಪ್ರಾಪ್ತ ಬಾಲಕನೋರ್ವ ಅಸುನೀಗಿರುವ ಘಟನೆ ಸಂಭವಿಸಿದೆ.

ಬೆಕ್ಕಳಲೆ ಗ್ರಾಮದಿಂದ ಮರಳಿಗ ಗ್ರಾಮದ ದೇವಾಲಯಕ್ಕೆಂದು ಕುಟುಂಬ ಸದಸ್ಯರೊಡನೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ವಿಭಜಕಕ್ಕೆ ಡಿಕ್ಕಿಯಾಗಿ ತೀವ್ರ ಗಾಯಗೊಂಡ ನಿತೀನ್ (9) ಸ್ಥಳದಲ್ಲೇ ಅಸುನೀಗಿದ್ದಾನೆ.

ಕಾರಿನಲ್ಲಿದ್ದ ಶಿವಣ್ಣ ಸೇರಿದಂತೆ ಕುಟುಂಬ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.