ಮೈಸೂರು: ಲೈಂಗಿಕ ಕಿರುಕುಳ ಆರೋಪ, ಕಾನ್‌ಸ್ಟೆಬಲ್‌ ಬಂಧನ!

ಮೈಸೂರು: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್​ಟೇಬಲ್​ವೊಬ್ಬರನ್ನು ನಜರಬಾದ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಗರದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಕಾನ್ಸ್​ಟೇಬಲ್ ಮೆಹಬೂಬ್ (36) ಬಂಧಿತ ಆರೋಪಿ.

ಇವರು ರಾಘವೇಂದ್ರ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಮೆಹಬೂಬ್‌ ವಿರುದ್ಧ ಜೂನ್ 15 ರಂದು ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿ ನಜರಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ‌.

× Chat with us