ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ನನಗೆ ಜೀವ ಬೆದರಿಕೆ ಇದೆ ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.ಈ ಕುರಿತು ಇಂದು ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ಸಚಿವ ಮಧು ಬಂಗಾರಪ್ಪ ಬೆಂಬಲಿಗರು ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ. ಹೀಗಾಗಿ ಇಂದು ಪೊಲೀಸ್ ಆಯುಕ್ತರನ್ನ ಭೇಟಿ ಮಾಡಿ ಸಚಿವ ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ಹೇಳಿದರು.
ಸ್ಪೀಕರ್ ಅವರನ್ನೂ ಭೇಟಿ ಮಾಡಿ ಮಧು ಬಂಗಾರಪ್ಪ ವಿರುದ್ದ ದೂರು ಕೊಡುತ್ತೇವೆ. ಕಾನೂನು ಹೋರಾಟ ಕೂಡ ಮಾಡುತ್ತೇವೆ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.
ಹರಿಪ್ರಸಾದ್ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ. ಬೇರೆ ಸಮುದಾಯದವರು ಹೋರಾಟ ಮಾಡಿದ್ದರಲ್ಲಾ. ಸಮುದಾಯಕ್ಕೆ ಮಧು ಬಂಗಾರಪ್ಪ ಕೊಡುಗೆ ಏನು ಎಂದು ಪ್ರಣವಾನಂದ ಪ್ರಶ್ನಿಸಿದರು.