ರಾಜಕೀಯ

ಸಿದ್ದರಾಮಯ್ಯನವರು ಪೂರ್ಣಾವಯ ಮುಖ್ಯಮಂತ್ರಿ

ಬೆಂಗಳೂರು- ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯನವರೇ ಪೂರ್ಣಾವ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 50-50 ಅನುಪಾತದಲ್ಲಿ ಅಕಾರ ಹಂಚಿಕೆಯಾಗಿದೆ ಎಂದು ಯಾರೂ ಹೇಳಿಲ್ಲ. ದೆಹಲಿಯಲ್ಲಿ ನಡೆದ ಸಭೆಗಳಲ್ಲಿ ನಡೆದ ಚರ್ಚೆಯ ಮಾಹಿತಿಗಳು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೆ ಮಾತ್ರ ಗೊತ್ತು. ಈವರೆಗೂ ಅವರು ಎಲ್ಲಿಯೂ ಈ ಬಗ್ಗೆ ಮಾತನಾಡಿಲ್ಲ ಎಂದರು.
ಸಿದ್ದರಾಮಯ್ಯನವರು ಪೂರ್ಣಾವಯ ಮುಖ್ಯಮಂತ್ರಿಯಾಗಿರಬೇಕು ಎಂಬುದು ನನ್ನೊಬ್ಬನದೇ ಅಲ್ಲ, ಕಾಂಗ್ರೆಸ್‍ನ ಬಹುತೇಕರ ಅಭಿಪ್ರಾಯ.  ನಿಗದಿಯಾಗಿದೆ ಎಂಬುದು ಈವರೆಗೂ ಯಾರೂ ಅಕೃತವಾಗಿ ತಿಳಿಸಿಲ್ಲ. ನಮ್ಮ ಅಭಿಪ್ರಾಯಗಳನ್ನು ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಡುತ್ತೇವೆಎಂದು ತಿಳಿಸಿದ್ದಾರೆ.
ಈ ಮೂಲಕ ಕಾಂಗ್ರೆಸ್‍ನಲ್ಲಿ ಮತ್ತೊಮ್ಮೆ ವಿವಾದದ ಅಲೆ ಸೃಷ್ಟಿಯಾಗಿದೆ. ಸಿದ್ದರಾಮಯ್ಯನವರ ಆಪ್ತಬಳಗದಲ್ಲಿರುವ ಕೆ.ಎನ್.ರಾಜಣ್ಣ ನಿನ್ನೆ ಹೇಳಿಕೆ ನೀಡಿ, ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದೆ. ಈ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ, ವೀರಶೈವ ಸಮುದಾಯಗಳಿಗೆ ತಲಾ ಒಂದರಂತೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕೆಂದು ಹೈಕಮಾಂಡ್‍ಗೆ ಪತ್ರ ಬರೆಯುತ್ತೇನೆ, ಮನವರಿಕೆ ಮಾಡಿಕೊಡಲು ಪ್ರಯತ್ನಿಸುತ್ತೇನೆ ಎಂದಿದ್ದರು. ಇದು ವಿವಾದವನ್ನು ಸೃಷ್ಟಿಸಿತ್ತು. ಈಗ ಪೂರ್ಣಾವ ಮುಖ್ಯಮಂತ್ರಿಯ ಬಾಣ ಬಿಟ್ಟಿದ್ದಾರೆ.
ತುಮಕೂರಿನಲ್ಲಿಂದು ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿ ಉತ್ತಮ ಸಂಘಟನೆ ಮಾಡುತ್ತಿದ್ದಾರೆ. ಅವರ ಬಗ್ಗೆ ನಾನೂ ಕೂಡ ಹಲವು ಬಾರಿ ಮೆಚ್ಚುಗೆಯ ಮಾತುಗಳನ್ನಾಡಿದ್ದೇನೆ. ಕಾಂಗ್ರೆಸ್ ಪಕ್ಷ ಮತ್ತಷ್ಟು ಉಪಮುಖ್ಯಮಂತ್ರಿಗಳನ್ನಾಗಿ ಮಾಡಬೇಕು ಎಂಬ ತಮ್ಮ ಹೇಳಿಕೆ ಡಿ.ಕೆ.ಶಿವಕುಮಾರ್ ಸೇರಿದಂತೆ ಯಾರ ವಿರುದ್ಧವೂ ಅಲ್ಲ. ಅವರು ಬೇಸರಗೊಳ್ಳುವ ಅಗತ್ಯವೂ ಇಲ್ಲ ಎಂದು ಹೇಳಿದರು.
ನಾನು ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ. ಆದರೆ ಬಹಳಷ್ಟು ಮಂದಿ ಈ ವಿಷಯವಾಗಿ ತಮ್ಮೊಂದಿಗೆ ಚರ್ಚೆ ಮಾಡಿದ್ದಾರೆ. ಎಲ್ಲರ ಜೊತೆಗೂ ಸೇರಿ ಮುಂದಿನ ದಿನಗಳಲ್ಲಿ ಈ ಬಗ್ಗೆ ಹೈಕಮಾಂಡ್‍ನ ಗಮನ ಸೆಳೆಯುವುದಾಗಿ ತಿಳಿಸಿದರು.
ಲೋಕಸಭೆಯ ಚುನಾವಣೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ತಯಾರಿಗಳನ್ನು ನಡೆಸಿದೆ. ರಾಜಕಾರಣ ನಿರಂತರವಾಗಿ ಚಲನಶೀಲತೆ ಹೊಂದಿದೆ. ಇಲ್ಲಿ ಮೈತ್ರಿ ನಡೆಯುವುದು ಸಾಮಾನ್ಯ. ಬೇರೆಯಾಗುವುದೂ ಕೂಡ ಹೊಸದಲ್ಲ ಎಂದು ಹೇಳಿದರು.
ಜೆಡಿಎಸ್, ಬಿಜೆಪಿ ಮೈತ್ರಿಯ ಬಗ್ಗೆ ಅವರ ಪಕ್ಷಗಳಲ್ಲೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅದರಲ್ಲಿ ನಾವು ಪ್ರತಿಕ್ರಿಯಿಸುವುದು ಅನಗತ್ಯ. ಈವರೆಗಿನ ಮಾಹಿತಿ ಪ್ರಕಾರ, ಬಿಜೆಪಿಯ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಯಡಿಯೂರಪ್ಪನವರು ಮೈತ್ರಿ ಇನ್ನೂ ಪೂರ್ತಿಗೊಂಡಿಲ್ಲ ಎಂದಿದ್ದಾರೆ. ರಾಜಕಾರಣದಲ್ಲಿ ಕೆಲವರು ಸಿದ್ಧಾಂತಗಳನ್ನು ಒಪ್ಪಿಕೊಳ್ಳುತ್ತಾರೆ, ಇನ್ನೂ ಕೆಲವರು ವಿರೋಧ ಮಾಡುತ್ತಾರೆ. ಅದಕ್ಕೆ ಏನೂ ಮಾಡಲಾಗುವುದಿಲ್ಲ ಎಂದರು.
ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮ ಆದ್ಯತೆ. ಅದಕ್ಕಾಗಿ ಎಲ್ಲರ ಜೊತೆಗೂ ಚರ್ಚೆಗಳು ನಡೆಯುತ್ತಿವೆ. ಅದನ್ನು ಆಧರಿಸಿ ಪಕ್ಷದ ವರಿಷ್ಠರಿಗೆ ಸಲಹೆ ನೀಡುತ್ತೇವೆ ಎಂದರು.
ಬಿಜೆಪಿಯ ಸಂಸದರು ಕಾಂಗ್ರೆಸ್‍ಗೆ ಸೇರುತ್ತಾರೆ ಎಂಬುದರ ಬಗ್ಗೆ ತಮಗೆ ಮಾಹಿತಿ ಇಲ್ಲ. ಅವರು ಚುನಾವಣೆ ರಾಜಕೀಯದಿಂದ ನಿವೃತ್ತರಾಗುತ್ತೇವೆ ಎಂಬುದನ್ನು ಕೇಳಿದ್ದೇನೆ. ಹೈಕಮಾಂಡ್ ಕೆಲವು ನಿರ್ಧಾರಗಳನ್ನು ಕೈಗೊಂಡಾಗ ಕೆಳಹಂತದಲ್ಲಿ ವ್ಯತ್ಯಾಸಗಳಾಗುವುದು ಸಾಮಾನ್ಯ. ಅಂತಹ ಸಂದರ್ಭದಲ್ಲಿ ಅಭಿಪ್ರಾಯಗಳು ಭಿನ್ನವಾಗಿರುವುದು ಹೊಸದಲ್ಲ ಎಂದು ಹೇಳಿದರು.
ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬುದು ಖಚಿತವಾಗಿದೆ. ನಮ್ಮ ಪಕ್ಷದ ಶಾಸಕ ಭೀಮಣ್ಣ ಅವರು ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಸೇರುವುದು ಖಚಿತ ಎಂದಿದ್ದಾರೆ. ಈ ರೀತಿಯ ಬೆಳವಣಿಗೆಗಳು ಸಾಮಾನ್ಯ ಎಂದರು.
ಬಿಜೆಪಿಯ ಮಾಜಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್‍ಗೆ ಬರುತ್ತಾರೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ರ್ಪಸುತ್ತಾರೆ ಎಂಬುದು ಗಾಳಿಮಾತಷ್ಟೆ. ಅಂತಹ ಯಾವ ಚರ್ಚೆಗಳೂ ನಡೆದಿಲ್ಲ ಎಂದು ತಿಳಿಸಿದರು.
ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್ ಬಿಟ್ಟುಹೋಗುವಾಗ ಚುನಾವಣೆಯಲ್ಲಿ ತಮಗಾಗಿ ಕೆಲಸ ಮಾಡಿದವರ ಬಳಿ ಒಂದು ಮಾತನ್ನೂ ಕೇಳಲಿಲ್ಲ. ಹಲವಾರು ಬಾರಿ ಪಕ್ಷ ಬದಲಾವಣೆ ಮಾಡಿದ್ದಾರೆ. ಈಗ ಜೆಡಿಎಸ್, ಬಿಜೆಪಿ ಮೈತ್ರಿಯಾದರೆ ಅವರ ಭವಿಷ್ಯ ಏನೆಂದು ಗೊತ್ತಿಲ್ಲ, ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಅವರೇ ಹೇಳಬೇಕು ಎಂದರು.
ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಪಂಚಖಾತ್ರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕೆಂಬ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

lokesh

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

7 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

7 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

7 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

7 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

7 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

7 hours ago