ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಪಟ್ಟಿ ಸಿದ್ಧಪಡಿಸುವ ಕಾರ್ಯದಲ್ಲಿ ತೊಡಗಿರುವ ಕಾಂಗ್ರೆಸ್ ಗುರುವಾರ ಮಹತ್ವದ ಸಭೆ ನಡೆಸಿ, ಸುಮಾರು 130 ಕ್ಷೇತ್ರಗಳಿಗೆ ಹೆಸರನ್ನು ಅಂತಿಮಗೊಳಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
130 ಅಭ್ಯರ್ಥಿಗಳ ಮೊದಲ ಪಟ್ಟಿ ಫೆ.15 ರೊಳಗೆ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಕಸರತ್ತು ನಡೆಯುತ್ತಿದ್ದು, ಸಭೆಯ ನಿರ್ಧಾರದೊಂದಿಗೆ ಎಐಸಿಸಿಗೆ ಪಟ್ಟಿ ರವಾನೆ ಮಾಡಲಾಗುವುದು.
130 ಕ್ಷೇತ್ರಗಳಿಗೆ ಒಂದೇ ಹೆಸರನ್ನು ಕೆಪಿಸಿಸಿಯಿಂದ ಶಿಫಾರಸು ಮಾಡಲಾಗಿದೆ. ತೀವ್ರ ಪೈಪೋಟಿ ಇರುವ ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆದು ಕೆಲವು ಕ್ಷೇತ್ರಗಳಿಗೆ ಎರಡು ಹೆಸರನ್ನು ಮತ್ತು ಬೆರಳೆಣಿಕೆಯಷ್ಟು ಕ್ಷೇತ್ರಗಳಿಗೆ ಮೂರು ಹೆಸರನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ. ಸಮಸ್ಯೆ ಇಲ್ಲದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಎರಡನೇ ಪಟ್ಟಿಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಕೆಪಿಸಿಸಿ, ಎಐಸಿಸಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿಸಿರುವ ಸಮೀಕ್ಷೆ, ಕಾರ್ಯಾಧ್ಯಕ್ಷರು ನೀಡಿದ ವರದಿ, ಜಿಲ್ಲಾ ಮತ್ತು ಬ್ಲಾಕ್ ಶಿಫಾರಸು ಆಧರಿಸಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
ಈ ಮಧ್ಯೆ, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಸಹ ಎಲ್ಲ ಜಿಲ್ಲೆಗಳ ಸ್ಥಿತಿಗತಿ ಕುರಿತು ಹೈಕಮಾಂಡ್ಗೆ ವರದಿ ನೀಡಿದ್ದಾರೆ. ಬುಧವಾರ ರಾಜ್ಯ ಉಸ್ತುವಾರಿ ಸುರ್ಜೆವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪೂರ್ವಭಾವಿ ಚರ್ಚೆ ನಡೆಸಿದರು.
ಫೆ.3ರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೋಲಾರದ ಕುರುಡುಮಲೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಸವಕಲ್ಯಾಣದಿಂದ ಎರಡನೇ ಹಂತದ ಪ್ರಜಾಧ್ವನಿ ಯಾತ್ರೆ ಆರಂಭಿಸಲಿದ್ದು ಅದಕ್ಕೆ ಪೂರ್ವಭಾವಿಯಾಗಿ 130 ರಿಂದ 150 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಸಿಲು ನಿರ್ಧರಿಸಲಾಗಿತ್ತು. ಕೆಪಿಸಿಸಿಯಿಂದ ಎಐಸಿಸಿಗೆ ಪಟ್ಟಿ ರವಾನೆ ಮಾಡಿದ ನಂತರ ಫೆ.15 ರೊಳಗೆ ಮೊದಲ ಪಟ್ಟಿ ಬಿಡುಗಡೆಯಾಗಲಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಕೇಂದ್ರ ಬಜೆಟ್ : ಕೊಡಗು, ಚಾ.ನಗರಕ್ಕೆ ನರ್ಸಿಂಗ್ ಕಾಲೇಜು
Next Article ಬೆಟ್ಟದಪುರ : ನಿಷೇಧವಿದ್ದರೂ ಜಾನುವಾರು ತಂದ ರೈತರು