Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಬಿಜೆಪಿ ಸೇರ್ಪಡೆಗೊಂಡ ಬಳಿಕ ಅಭಿಪ್ರಾಯ ಹಂಚಿಕೊಂಡ ಸಂಸದೆ ಸುಮಲತಾ!

ಬೆಂಗಳೂರು : ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. 

ಸಾಮಾಜಿಕ ಜಾಲತಾಣದ ತಮ್ಮ ಎಕ್ಸ್‌ ಖಾತೆಯಲ್ಲಿ ಅಭಿಪ್ರಾಯವನ್ನು ಹಂಚಿಕೊಂಡಿರುವ ಅವರು, ದೇಶದ ಸುರಕ್ಷತೆ, ಅಭಿವೃದ್ಧಿ ಮತ್ತು ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಸಂಕಲ್ಪದೊಂದಿಗೆ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ.

ಮಾಜಿ ಮುಖ್ಯಮಂತ್ರಿಗಳು, ಕರ್ನಾಟಕ ಬಿಜೆಪಿಯ ನಾಯಕರಾದ ಬಿ.ಎಸ್.‌ ಯಡಿಯೂರಪ್ಪ ಹಾಗೂ  ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಹಾಗೂ ಬಿಜೆಪಿಯ ಇತರ ಪ್ರಮುಖ ನಾಯಕರುಗಳ ಸಮ್ಮುಖದಲ್ಲಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನೆರವೇರಿತು.

ಐದು ವರ್ಷಗಳ ಹಿಂದೆ ನಾನು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾಗ ಬಿಜೆಪಿ ನನಗೆ ಬಾಹ್ಯ ಬೆಂಬಲ ನೀಡಿತ್ತು. ಪಕ್ಷೇತರ ಅಭ್ಯರ್ಥಿಯಾಗಿದ್ದರೂ ಸಹ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನನ್ನ ಪರವಾಗಿ ಮತ ನೀಡುವಂತೆ ಜನರಲ್ಲಿ ವಿನಂತಿ ಮಾಡಿದ್ದನ್ನು ನಾನೆಂದಿಗೂ ಮರೆಯುವುದಿಲ್ಲ.

ನಮ್ಮ ಮಂಡ್ಯದ ಸರ್ವತೋಮುಖ ಅಭಿವೃದ್ಧಿ, ವಿಕಸಿತ ಕರ್ನಾಟಕ, ವಿಕಸಿತ ಭಾರತದ ಗುರಿಯೊಂದಿಗೆ ಜೊತೆಯಾಗಿ ಕೆಲಸ ಮಾಡೋಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Tags:
error: Content is protected !!